25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯಿಂದ ನೀಡಿದ 2023-24 ಸಾಲಿನ ಯೋಜನಾ ಪುಸ್ತಕ ಬಿಡುಗಡೆ ಕಾರ್ಯಕ್ರಮ ಜೂ. 30 ರಂದು ನಡೆಯಿತು.

ಯೋಜನಾ ಪುಸ್ತಕ ಬಿಡುಗಡೆಯನ್ನು ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರಾದ ಸುರೇಶ್ ಕುಮಾರ್, ಬೆಳ್ತಂಗಡಿ ತಾಲೂಕಿನ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ವೀರೂಪಾಕ್ಷಪ್ಪ, ಪ್ರಭಾರ ಆರೋಗ್ಯಧಿಕಾರಿ ಪ್ರಕಾಶ್, ಸರಕಾರಿ ನೌಕರರ ಅಧ್ಯಕ್ಷರಾದ ಜಯರಾಜ್ ಹಾಗೂ ಪದಾಧಿಕಾರಿಗಳು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ಶಾಸಕರಾಗಿ ಪುನರ್ ಆಯ್ಕೆಯಾದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ರವರಿಗೆ ಭಾರತ್ ಸ್ಕೌಟ್ ಮತ್ತು ಗೈಡ್ ನಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ.ಜಿ ಕಜೆ, ಜಿಲ್ಲಾ ಸ್ಕೌಟ್ ಆಯುಕ್ತರಾದ ರಾಮಶೇಷ ಶೆಟ್ಟಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ, ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಎಚ್ ಪದ್ಮ ಕುಮಾರ್, ನಿಕಟ ಪೂರ್ವ ಅಧ್ಯಕ್ಷರಾದ ವಿಠಲ್ ಶೆಟ್ಟಿ, ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಕೋಶಾಧಿಕಾರಿ ಶ್ರೀ ಬೆಳ್ಳಿಯಪ್ಪ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಎಡಿಸಿ ಲೋಕೇಶ್ವರಿ ವಿನಯ ಚಂದ್ರ, ವಾಟರ್ ಜೆ ಪಿಂಟೋ,ಹಿರಿಯ ತರಬೇತುದಾರರಾದ ರಮೇಶ್ ಆಚಾರ್ಯ,ಸ್ಥಳೀಯ ಸಂಸ್ಥೆಯ ದಳ ನಾಯಕರುಗಳು ಉಪಸ್ಥಿತರಿದ್ದರು.

Related posts

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

Suddi Udaya

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya
error: Content is protected !!