38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ


ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದ ಅಪರಿಚಿತ ವ್ಯಕ್ತಿಯೋರ್ವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು ಮೃತರ ಹೆಸರು ವಿಳಾಸ ಪತ್ತೆಯಾಗದ ಕಾರಣ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ ಪೊಲೀಸ್ ರು ಹುಡುಕಾಟ ನಡೆಸುತ್ತಿದ್ದಾರೆ.

ಧರ್ಮಸ್ಥಳ ದೇವಸ್ಥಾನದ ಮಾಹಿತಿ ಕಛೇರಿಯಲ್ಲಿ, ಸ್ವಚ್ಛತಾ ವಿಭಾಗದಲ್ಲಿ ರಾತ್ರಿ ಪಾಳಿ ಕೆಲಸ ಮಾಡಿಕೊಂಡಿದ್ದು ವ್ಯಕ್ತಿಯೊಬ್ಬರು ಜೂ.30 ರಂದು ರಾತ್ರಿ ಮಾಹಿತಿ ಕಚೇರಿಯ ಬಳಿ ಇರುವ ಮೆಟ್ಟಿಲಿನ ಬಳಿ ಸುಮಾರು 45 ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಅಸ್ವಸ್ಥರಾಗಿ ಮಾತನಾಡಲು ಕಷ್ಟವಾಗುತ್ತಿರುವುದನ್ನು ಕಂಡು ಕೂಡಲೇ ಅವರು ಕೆಲಸ ಮಾಡುತ್ತಿದ್ದ ಕಚೇರಿಯಿಂದ ಅಂಬ್ಯುಲೆನ್ಸ್ ಗೆ ಕರೆ ಮಾಡಿ ಸದ್ರಿ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ಸಮಯ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಾರೀಸುದಾರರ ಪತ್ತೆಗಾಗಿ ಮನವಿ ಮಾಡಿದ್ದಾರೆ.

Related posts

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya
error: Content is protected !!