ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯಲ್ಲಿ ಜು1 ರಂದು ಅಖಿಲ ಭಾರತ ಸಾಹಿತ್ಯ ಪರಿಷತ್, ಕರ್ನಾಟಕ ಇದರ ಬೆಳ್ತಂಗಡಿ ತಾಲೂಕು ಸಮಿತಿಯ ಆಶ್ರಯದಲ್ಲಿ “ಶುಚಿ ಜೀವನ ದರ್ಶನ” ಎಂಬ ವಿಷಯದ ಕುರಿತು ಚಿಂತನ ಕಾರ್ಯಕ್ರಮ ಜರುಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಭರತೇಶ ಶೆಟ್ಟಿ , ಎಕ್ಕಾರು ಆಗಮಿಸಿ ವಿದ್ಯಾರ್ಥಿಗಳಿಗೆ ಪೌರಾಣಿಕ ಪಾತ್ರ ಗಳ ಉದಾಹರಣೆ ಯೊಂದಿಗೆ ಆದರ್ಶ ವ್ಯಕ್ತಿಯಾಗಿ ಹೇಗೆ ಬಾಳಬೇಕು ಎಂಬ ಜೀವನ ಮೌಲ್ಯ ಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ ,ಇದರ ಬೆಳ್ತಂಗಡಿ ಸಮಿತಿಯ ಅಧ್ಯಕ್ಷ ಗಣಪತಿ ಕುಳಮರ್ವ ಸ್ವಾಗತಿಸಿದರು.
ಸುಂದರ ಶೆಟ್ಟಿ ಇವರು ಪ್ರಾಸ್ತಾವಿಕ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ವಹಿಸಿದ್ದರು. ಶ್ರೀಮತಿ ಸುಭಾಶಿಣಿ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಸೇವಾ ಸಮಿತಿಯ ಸದಸ್ಯರು ಶಿಕ್ಷಕ ವೃಂದದವರು ಭಾಗಿಯಾಗಿದ್ದರು.