23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

ಕನ್ಯಾಡಿ : ಕನ್ಯಾಡಿ (ಜಯನಗರ) ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಇತ್ತೀಚೆಗೆ ನಡೆದಿದ್ದು ಭಾನುವಾರ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಜರಗಿತು.
ಮುಂದಿನ ಐದು ವರ್ಷ ಅವಧಿಗೆ ಅಧ್ಯಕ್ಷರಾಗಿ ಸೌಮ್ಯಲತಾ ಜಯಂತಗೌಡ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದು ಸವಿತಾ ಪ್ರಭಾಕರ ಪೂಜಾರಿ 8-5 ಮತಗಳ ಅಂತರದಿಂದ ಜಯ ಗಳಿಸಿದರು.
ವಸಂತಿ ಕಾರಿಜೆ, ಜಲಜಾ ಮಾಳಿಗೆ ಮನೆ, ಸುನಂದಾ ಬನತ್ರೋಡಿ, ರತ್ನಾವತಿ ಮಾಳಿಗೆ ಮನೆ, ದೇವಕಿ ಶುಭಕರ ಪೂಜಾರಿ, ಮಲ್ಲಿಕಾ ರಘು ಶೆಟ್ಟಿ, ಲತಾ ಶೇಖರ ಆಚಾರ್ಯ, ಪ್ರೇಮಾ ಸತೀಶ ಗೌಡ, ಗೀತಾ ನವೀನ ಗೌಡ, ಕಮಲಾ ಪಕೀರ, ಗೀತಾ ವಿಠಲ ನಾಯ್ಕ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!