23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

ಬೆಳ್ತಂಗಡಿ: ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ, ಜನಸ್ನೇಹಿ ಡಾ. ಸದಾನಂದ ಪೂಜಾರಿ ಅವರಿಗೆ ಕರ್ನಾಟಕ ರಾಜ್ಯ ಸರಕಾರ ಕೊಡಮಾಡುವ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ ದೊರೆತಿದೆ.

ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿ ಶುಭಾಶಯ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಹಾಗೂ ಇತರರು ಉಪಸ್ಥಿತರಿದ್ದರು.

ಡಾ. ಸದಾನಂದ ಪೂಜಾರಿಯವರು ಭಾರತೀಯ ಮೆಡಿಕಲ್ ಅಸೋಸಿಯೇಶನ್ ಸಂಸ್ಥೆಯ ಪ್ರಮುಖ ಸ್ಥಾನವನ್ನು ಅಲಂಕರಿಸಿದ್ದು ಹಲವಾರು ಆರೋಗ್ಯ ಶಿಬಿರಗಳನ್ನು ಮಾಡಿ ಜನರಿಗೆ ಆರೋಗ್ಯ ಸುಧಾರಣೆಯ ಬಗ್ಗೆ ತಿಳಿಪಡಿಸಿದ್ದಾರೆ.

ಹಲವಾರು ಸಂಘ ಸಂಸ್ಥೆಗಳು ಇವರ ಸಾಧನೆಯನ್ನು ಗುರುತಿಸಿ ಸಮ್ಮಾನ ಗೌರವ ಸಲ್ಲಿಸಿದೆ.

ಇವರು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಅಂಗಡಿಬೆಟ್ಟು ನಿವಾಸಿಯಾಗಿದ್ದಾರೆ.

Related posts

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya
error: Content is protected !!