ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ‌ ಲತಾ ಅವರ ಅಧ್ಯಕ್ಷತೆಯಲ್ಲಿ‌ ಗ್ರಾ.ಪಂ ಸಭಾಂಗಣದಲ್ಲಿ ಸಭಾಭವನದಲ್ಲಿ ಜು. 3 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ತಾರಕೇಸರಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಆಶ್ರಯ ಯೋಜನೆಯಲ್ಲಿ ಮನೆ ಮಂಜೂರುಗೊಳಿಸುವ ಪಕ್ರಿಯೇಯಲ್ಲಿ ಅಕ್ರಮ ನಡೆಯುತ್ತಿದ್ದು ಅದನ್ನು ತಡೆಯಬೇಕೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಹಲವಾರು ಚರ್ಚೆಗಳು ನಡೆದವು.

ಗ್ರಾಮ ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ವಿನಯಚಂದ್ರ, ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್.ಬಿ, ಸದಸ್ಯರಾದ ಅಹಮ್ಮದ್ ಕಬೀರ್, ಮೋಹಿನಿ, ವಿಜಯ ಕೆ, ಚೇತನಾ, ರಾಮಣ್ಣ, ಶಾಂಭವಿ, ಶಾಹುಲ್ ಹಮೀದ್, ಚಂದ್ರಶೇಖರ ಗೌಡ ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು, ಅಂಗನವಾಡಿ,ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಗ್ರಾಮಸ್ಥರು, ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment

error: Content is protected !!