April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

ಕಲ್ಮಂಜ : ಕಲ್ಮಂಜ ಗ್ರಾಮದ ಶಾಲಾ ಬಳಿಯ ನಿವಾಸಿ, ಉಜಿರೆ ಅರಿಪ್ಪಾಡಿ ಕಾಂಪ್ಲೇಕ್ಸ್‌ನಲ್ಲಿ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ಬಾಲಕೃಷ್ಣ ಶೆಣೈ (56ವ) ಅವರು ಹೃದಯಾಘಾತದಿಂದ ಇಂದು ಮಧ್ಯಾಹ್ನ ಮಂಗಳೂರು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟಿದ್ದಾರೆ.
ಮಧ್ಯಾಹ್ನ ಊಟವಾದ ಬಳಿಕ ಉಜಿರೆಯ ತನ್ನ ಕಚೇರಿಯಲ್ಲಿದ್ದ ವೇಳೆ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರು ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ.

ಉಜಿರೆಯಲ್ಲಿ ಕಳೆದ 20 ವರ್ಷಗಳಿಂದ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ಇವರು ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿ, ಕಿಟ್ಟು ಎಂದೇ ಎಲ್ಲರಿಂದ ಕರೆಯಲ್ಪಡುತ್ತಿದ್ದರು. ಮೃತರು ಪತ್ನಿ ಇಬ್ಬರು ಪುತ್ರರು ಬಂಧು-ವರ್ಗದವರನ್ನು ಅಗಲಿದ್ದಾರೆ.

Related posts

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!