September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯಲ್ಲಿ ಜು1 ರಂದು ಅಖಿಲ ಭಾರತ ಸಾಹಿತ್ಯ ಪರಿಷತ್, ಕರ್ನಾಟಕ ಇದರ ಬೆಳ್ತಂಗಡಿ ತಾಲೂಕು ಸಮಿತಿಯ ಆಶ್ರಯದಲ್ಲಿ “ಶುಚಿ ಜೀವನ ದರ್ಶನ” ಎಂಬ ವಿಷಯದ ಕುರಿತು ಚಿಂತನ ಕಾರ್ಯಕ್ರಮ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಭರತೇಶ ಶೆಟ್ಟಿ , ಎಕ್ಕಾರು ಆಗಮಿಸಿ ವಿದ್ಯಾರ್ಥಿಗಳಿಗೆ ಪೌರಾಣಿಕ ಪಾತ್ರ ಗಳ ಉದಾಹರಣೆ ಯೊಂದಿಗೆ ಆದರ್ಶ ವ್ಯಕ್ತಿಯಾಗಿ ಹೇಗೆ ಬಾಳಬೇಕು ಎಂಬ ಜೀವನ ಮೌಲ್ಯ ಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ ,ಇದರ ಬೆಳ್ತಂಗಡಿ ಸಮಿತಿಯ ಅಧ್ಯಕ್ಷ ಗಣಪತಿ ಕುಳಮರ್ವ ಸ್ವಾಗತಿಸಿದರು.

ಸುಂದರ ಶೆಟ್ಟಿ ಇವರು ಪ್ರಾಸ್ತಾವಿಕ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ವಹಿಸಿದ್ದರು. ಶ್ರೀಮತಿ ಸುಭಾಶಿಣಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ಸದಸ್ಯರು ಶಿಕ್ಷಕ ವೃಂದದವರು ಭಾಗಿಯಾಗಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!