37.7 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

ವೇಣೂರು : ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ 2024ರ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣವು ಜು.9 ರಂದು ವೇಣೂರು ಯಾತ್ರಿ ನಿವಾಸದಲ್ಲಿ ನಡೆಯಲಿದೆ.

ಪರಮಪೂಜ್ಯ ಮಹಾಸ್ವಾಮೀಜಿ ಭಾರತಭೂಷಣ ಡಾ| ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಪಾವನ ಸಾನಿಧ್ಯ ಮತ್ತು ಆಶೀರ್ವಚನವನ್ನು ನೀಡಲಿದ್ದಾರೆ.

ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ವಹಿಸಲಿದ್ದಾರೆ.

ವೆಬ್ ಸೈಟ್ ನ್ನು ಮಾಜಿ ಸಚಿವ ಕೆ ಅಭಯಚಂದ್ರ ಜೈನ್ ಮೂಡಬಿದಿರೆ ಅನಾವರಣಗೊಳಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ ಹರ್ಷೇಂದ್ರ ಕುಮಾರ್ ಭಾಗವಹಿಸಲಿದ್ದಾರೆ ಎಂದು ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ ಕುಮಾರ್ ಇಂದ್ರ ತಿಳಿಸಿದ್ದಾರೆ

Related posts

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ