April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

ಬೆಳ್ತಂಗಡಿ : ಇತ್ತಿಚೇಗೆ ನಡೆದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲಿಗೆ ಕಾರಣರಾಗಿದ್ದೀರಿ ಎಂದು ವಿವರಣೆ ಕೇಳಿ ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ನೋಟಿಸ್ ಜಾರಿಯಾಗಿದೆ ಎಂದು ವರದಿಯಾಗಿದೆ.


ಕರ್ನಾಟಕ ವಿಧಾನ ಸಭಾ ಚುನಾವಣೆ 2023 ರಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ಧವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಯು ಸೋಲಲು ಕಾರಣರಾಗಿದ್ದಿರಿ ಎಂದು ಕೆಪಿಸಿಸಿ ಕಚೇರಿಗೆ ಲಿಖಿತ ದೂರು ಬಂದಿದ್ದು. ಈ ಬಗ್ಗೆ ವಿವರಣೆಯನ್ನು ಏಳು ದಿನಗಳ ಒಳಗಾಗಿ ಕೆಪಿಸಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ನಾಯಕ ಗಂಗಾಧರ ಗೌಡ, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಗೌಡ ಇವರಿಗೆ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಶಿಸ್ತು ಕ್ರಮ ಕಮಿಟಿಯ ಅಧ್ಯಕ್ಷ ಕೆ.ರಹಮನ್ ಖಾನ್ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya
error: Content is protected !!