April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

ಬೆಳ್ತಂಗಡಿ: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ. ಇತ್ತೀಚೆಗಷ್ಟೇ ಶಾಲಾ ಬ್ಯಾಗ್‌ ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ. ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಉಲ್ಲಾಸದಿಂದ ಹೊರೆಯಾಗಿಸದೆ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ.

2023-24 ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.

ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು, ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್‌ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಜಿಲ್ಲಾ, ತಾಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.

ಸಂಭ್ರಮ ಶನಿವಾರದಂದು ಜಿಲ್ಲಾ ಹಂತ, ಬ್ಲಾಕ್ ಹಂತದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ.

Related posts

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!