33.4 C
ಪುತ್ತೂರು, ಬೆಳ್ತಂಗಡಿ
March 31, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ ಜು 5 ರಂದು ನಡೆದ ಗ್ರಾಮ ಸಭೆಯಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಗ್ರಾಮ ಪಂಚಾಯತ್ ಕಾಯಿದೆ ಮತ್ತು ಮಕ್ಕಳು ಹಾಗೂ ಮಕ್ಕಳ ಹಕ್ಕುಗಳ ಜಾರಿಗಾಗಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಎಂಬ ಎರಡು ಭಿತ್ತಿಪತ್ರಗಳ ಬಿಡುಗಡೆ ನಡೆಯಿತು.

ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ಕಲ್ಲಾಜೆ ಆಡಳಿತದಲ್ಲಿ ಮಕ್ಕಳು ಯೋಜನೆಯ ಬಗ್ಗೆ ತಿಳಿಸಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಗ್ರಾಮಸ್ಥರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿದ್ದ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ, ಪಂಚಾಯತ್ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.

Related posts

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya
error: Content is protected !!