September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಇದರ‌ ವತಿಯಿಂದ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಪುಂಜಾಲಕಟ್ಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರ ಶರತ್ ಕುಮಾರ್ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಮಾತನಾಡಿ, ಮದ್ಯಪಾನ ಹಾಗೂ ಮಾದಕ ವಸ್ತು ಗಳು ಮನುಷ್ಯನಿಗೆ ದೊಡ್ಡ ರೋಗವಾಗಿದೆ. ಇದರಿಂದ ಎಷ್ಟೋ ಅಪಘಾತ ಆತ್ಮಹತ್ಯೆ ಮೊದಲಾದ ಘಟನೆಗಳು ಮಧ್ಯಪಾನದಿಂದ ಹೆಚ್ಚಾಗಿ ನಡೆಯುತ್ತಿದ್ದು ವಿದ್ಯಾರ್ಥಿಗಳು ಈ ಕಡೆಗೆ ಗಮನ ಹರಿಸದೆ ಕೇವಲ ಓದುವ ಕಡೆ ಗಮನ ಹರಿಸಿ ಹೆತ್ತವರ ಕನಸನ್ನು ನನಸು ಮಾಡಬೇಕು‌. ಓದುವ ವಯಸ್ಸಿನಲ್ಲಿ ಯಾರೊಬ್ಬರೂ ದಾರಿತಪ್ಪಬಾರದು. ಗುಟ್ಕಾ ಧೂಮಪಾನಗಳಿಂದ ಯುವಜನತೆಯ ಜೀವನ ಹಾಳಾಗುತ್ತದೆ. ಸಹವಾಸ ದೋಷ ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಯಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ ಇದರಿಂದ ವೈಯಕ್ತಿಕ ಜೀವನದ ಜೊತೆ ಜೊತೆಯಲಿ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಕ್ರಿಯಾಶೀಲ ಹವ್ಯಾಸಗಳನ್ನು ರೂಪಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾ.ಯೋ. ಜಿಲ್ಲಾ ನಿರ್ದೇಶಕರ ಮಹಾಬಲ ಕುಲಾಲ್, ಜನಜಾಗೃತಿ ವಲಯಾಧ್ಯಕ್ಷ ಪದ್ಮನಾಭ ಶಾಲಿಯನ್ ಹಾಗೂ ಯೋಜನಾಧಿಕಾರಿ ದಯಾನಂದ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಶೈಲಿಯ ಬರವಣಿಗೆಯ ತರಬೇತಿ ಕಾರ್ಯಾಗಾರ

Suddi Udaya

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya
error: Content is protected !!