28.6 C
ಪುತ್ತೂರು, ಬೆಳ್ತಂಗಡಿ
September 19, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

ಬೆಳ್ತಂಗಡಿ: ರಾಜ್ಯ ಉಚ್ಚನ್ಯಾಯಾಲಯದ ತಡೆಯಾಜ್ಞೆಯ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿಯ 1 ಪಾರೆಂಕಿ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವು ತಡೆಹಿಡಿದು ಆದೇಶ ನೀಡಿದೆ.

ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ 1ನೇ ಕ್ಷೇತ್ರದಲ್ಲಿ ಸದಸ್ಯರಾಗಿದ್ದ ಗೋಪಾಲಕೃಷ್ಣ ಕೆ. ಇವರ ಆಯ್ಕೆಯನ್ನು ಆಸಿಂಧುಗೊಳಿಸಿ, ಹೊಸದಾಗಿ ಚುನಾವಣೆ ನಡೆಸಲು ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ನೀಡಿತ್ತು. ಈ ಆದೇಶದಂತೆ ಈ ಸ್ಥಾನ ಖಾಲಿ ಎಂದು ಜಿಲ್ಲಾಧಿಕಾರಿಗಳು ನೀಡಿದ ವರದಿಯಂತೆ ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ 1ನೇ ಸ್ಥಾನಕ್ಕೆ ಜು.23ರಂದು ಉಪಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಉಪಚುನಾವಣೆಯ ಪ್ರಕ್ರಿಯೆ ಜು.6ರಿಂದ ಪ್ರಾರಂಭಗೊಂಡಿದ್ದು, ಈ ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಇದೀಗ ಉಚ್ಚ ನ್ಯಾಯಾಲಯ ಗೋಪಾಲಕೃಷ್ಣ ಕೆ. ಇವರ ಆಯ್ಕೆಯನ್ನು ಆಸಿಂಧು ಗೊಳಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಾಂತರ ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ ೧ನೇ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆನ್ನು ತಕ್ಷಣಕ್ಕೆ ತಡೆಹಿಡಿಯುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ. ಉಪ ಚುನಾವಣಾ ಪಕ್ರಿಯೆಗೆ ಸಂಬಂಧಪಟ್ಟ ದಾಖಲೆಗಳನ್ನು ಮುಂದಿನ ಆದೇಶದವರೆಗೆ ಜಿಲ್ಲಾ ಖಜಾನೆಯಲ್ಲಿ ಸಂರಕ್ಷಿಸಿಡುವಂತೆ ಸಂಬಂಧಪಟ್ಟ, ಗ್ರಾಮ ಪಂಚಾಯಿತಿಯ ಚುನಾವಣಾಧಿಕಾರಿಗಳಿಗೆ ಸೂಕ್ತ ಸೂಚನೆಯನ್ನು ನೀಡಬೇಕೆಂದು ಮತ್ತು ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರಿಗೆ ಈ ಬಗ್ಗೆ ಸೂಕ್ತ ತಿಳುವಳಿಕೆಯನ್ನು ನೀಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

Related posts

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya
error: Content is protected !!