24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿವರದಿ

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಂದು ಮಂಡಿಸಿದ 2023-24ನೇ ಸಾಲಿನ ಮುಂಗಡ ಪತ್ರ ನೀರಸ ಹಾಗೂ ಹಿಂದಿನ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವ ರಾಜಕೀಯ ಭಾಷಣದಂತಿತ್ತು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಬೇಷರತ್ತಾಗಿ ಘೋಷಿಸಿದ ಐದು ಗ್ಯಾರಂಟಿ ಭಾಗ್ಯಗಳ ಮೇಲೆ ರಾಜ್ಯದ ಜನತೆ ಅಪಾರ ನೀರಿಕ್ಷೆಯೊಂದಿಗೆ ಕಾಯುತ್ತಿದ್ದು, ಇವುಗಳನ್ನು ಮುಂಗೈಗೆ ಬೆಲ್ಲ ಮುಟ್ಟಿಸಿದಂತೆ ಘೋಷಿಸಿ ಹೆಚ್ಚಿನ ಫಲಾನುಭವಿಗಳನ್ನು ಹೊರಗಿಡುವ ಯತ್ನ ನಡೆಸಿಕೊಟ್ಟ ಮಾತು ಉಳಿಸಿಕೊಳ್ಳಲಾಗದ ಸರ್ಕಾರವೆಂಬ ಹಣೆಪಟ್ಟಿ ಕಟ್ಟಿಕೊಂಡಿದೆ.
ವಿದ್ಯುತ್‌ದರ ಹೆಚ್ಚಳದಿಂದ ತತ್ತರಿಸಿದ ಕೈಗಾರಿಕಾ ವಲಯಕ್ಕೆ ಯಾವುದೇ ಉತ್ತೇಜನ ದೊರಕದಿರುವುದರಿಂದ ಉತ್ಪಾದನೆ ಕುಸಿದು, ನಿರುದ್ಯೋಗ ಪ್ರಮಾಣ ಹೆಚ್ಚಿ, ಬೆಲೆಯೇರಿಕೆಯ ಭೀತಿ ಉಂಟಾಗಿದೆ. ಮೋಟಾರು ವಾಹನ ತೆರಿಗೆ ಏರಿಕೆಯಿಂದ ದ್ವಿಚಕ್ರ ವಾಹನಗಳ ಬೆಲೆ ಏರಿಕೆಯುಂಟಾಗಿ ಯುವಜನತೆಯ ದೈನಂದಿನ ಚಟುವಟಿಕೆ ಕುಂಠಿತಗೊಳ್ಳಲಿದೆ. ಎ.ಪಿ.ಎಂ.ಸಿ ಕಾಯಿದೆ ತಿದ್ದುಪಡಿ ಹಿಂತೆಗೆತದಿಂದ ಕೃಷಿ ವಲಯಕ್ಕೆ ಮಾರಕವಾಗಲಿದೆ. ಅಡಿಕೆ ತೋಟಕ್ಕೆ ಮಾರಕವಾಗಿರುವ ಎಲೆಚುಕ್ಕಿ ರೋಗಕ್ಕೆ ಸೂಕ್ತ ಪರಿಹಾರ ಹಾಗೂ ಸಂಶೋಧನೆಗೆ ನಿಧಿ ಕಾಯ್ದಿರಿಸದೆ ರೈತಾಪಿ ವರ್ಗಕ್ಕೆ ನಿರಾಸೆಯಾಗಿದೆ. ನೀರಾವರಿ ಕ್ಷೇತ್ರಕ್ಕೂ ಯಾವುದೇ ಕೊಡುಗೆ ನೀಡದೆ ತಾರತಮ್ಯವೆಸಗಲಾಗಿದೆ. ಜಿಲ್ಲೆಯ ಮೀನುಗಾರಿಕೆ ವಲಯಕ್ಕೂ ಅನ್ಯಾಯವಾಗಿದೆ. ಪಠ್ಯಪುಸ್ತಕದ ವಿಷಯದಲ್ಲಿ ನೈಜ್ಯ ಇತಿಹಾಸ ತಿರುಚುವ ಕೆಲಸ ನಡೆದಿದೆ. ಒಟ್ಟಾರೆಯಾಗಿ ಈ ಮುಂಗಡಪತ್ರ ಆರ್ಥಿಕ ಶಿಸ್ತಿನ ಹಳಿ ತಪ್ಪಿಸಿ ಅಭಿವೃದ್ಧಿ ಕುಂಠಿತವಾಗಿ ನಾಡಿನ ಜನತೆಗೆ ಬಲುದೊಡ್ಡ ಹೊರೆಯಾಗಲಿದೆಯೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya
error: Content is protected !!