September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

ಬೆಳ್ತಂಗಡಿಯ ಸೌಜನ್ಯ ಕೊಲೆ ಪ್ರಕರಣ ವಿಚಾರದಲ್ಲಿ ಆರೋಪ ಎದುರಿಸುತ್ತಿರುವ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್ ಕಾನತ್ತೂರು ಕ್ಷೇತ್ರದಲ್ಲಿ ಮತ್ತೆ ಪ್ರಮಾಣ ಪೂರೈಕೆ ಮಾಡುವ ಮೂಲಕ ಆಪಾದನೆ ಮಾಡುವವರಿಗೆ ಸವಾಲೆಸೆದಿದ್ದಾರೆ.

ಫೆ.30ರಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಈ ಮೂವರು ‘ನಮ್ಮ ಮೇಲೆ ವಿನಾಕಾರಣ ಆರೋಪ ಮಾಡಲಾಗುತ್ತಿದೆ. ಇದರಿಂದ ಮನ ನೊಂದಿರುವ ನಾವು 10 ದಿನದೊಳಗೆ ಕಾಸರಗೋಡಿನ ಕಾನತ್ತೂರು ಶ್ರೀ ನಾಲ್ವರ್ ದೇವಸ್ಥಾನಕ್ಕೆ ತೆರಳಿ ಪ್ರಮಾಣ ಮಾಡಿರುವುದಾಗಿ ಹೇಳಿದ್ದೆವು. ಅದರಂತೆ ಕಾನತ್ತೂರು ಕ್ಷೇತ್ರಕ್ಕೆ ತೆರಳಿ ಪ್ರಕರಣಕ್ಕೆ ಸಂಬಂಧಿಸಿ ಪ್ರಮಾಣ ಮಾಡಲು ಒಂದು ದಿನಾಂಕವನ್ನು ನೀಡಬೇಕೆಂದು ಆಡಳಿತ ಮಂಡಳಿಗೆ ಮನವಿ ಮಾಡಿದ್ದೆವು. ಆದರೆ ಅವರು ಈಗಾಗಲೇ ಒಮ್ಮೆ ನೀವು ಬಂದು ದೂರು ನೀಡಿರುತ್ತೀರಿ. ಅದು ಅರ್ಧದಲ್ಲೇ ನಿಂತಿರುತ್ತದೆ. ಮತ್ತೊಮ್ಮೆ ನೀವು ಆಣೆ-ಪ್ರಮಾಣ ಮಾಡುವುದಿದ್ದಲ್ಲಿ 2 ಕಡೆಯವರು ಬಂದು ನಿಮ್ಮ ಸ್ವ-ಇಚ್ಛೆಯಲ್ಲಿ ಮಾಡಬಹುದು’ ಎಂದು ತಿಳಿಸಿದ್ದಾರೆ. ಅದರಂತೆ ನಾವು ದೈವಗಳ ಮುಂದೆ ಜು.4ರಂದು ಪ್ರಮಾಣ ಮಾಡಿದ್ದೇವೆ. ಈಗಾಗಲೇ ನಮ್ಮ ಮೇಲೆ ಆಪಾದನೆ ಮಾಡಿದ ವ್ಯಕ್ತಿಗಳು ಪ್ರಮಾಣ ಮಾಡಲು ಸಿದ್ಧರೆಂದು ಹೇಳಿಕೆ ನೀಡಿದ್ದು, ಆ ಮಾತಿನಂತೆ ಕಾನತ್ತೂರಿಗೆ ತೆರಳಿ ಆಣೆ ಪ್ರಮಾಣ ಮಾಡಲಿ. ಈ ಬಗ್ಗೆ ನಮಗೆ ಮುಂಚಿತವಾಗಿ ತಿಳಿಸಿದ್ದಲ್ಲಿ ಸಮಕ್ಷಮದಲ್ಲಿ ಮತ್ತೊಮ್ಮೆ ಪ್ರಮಾಣ ಮಾಡಲು ಸಿದ್ಧರಿದ್ದೇವೆ ಎಂದು ಮಲ್ಲಿಕ್ ಜೈನ್, ಉದಯ್‌ ಜೈನ್, ಧೀರಜ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya
error: Content is protected !!