September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

ಬೆಳ್ತಂಗಡಿ: ಕನಾ೯ಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರಿಂದ ಜನತಾ ದರ್ಶನ ಕಾರ್ಯಕ್ರಮ, ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ ಹಾಗೂ ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ ಜು.8ರಂದು‌ ಲಾಯಿಲ ಸಂಗಮ ಸಭಾ ಭವನದಲ್ಲಿ ಜರುಗಿತು.


ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ಎಂ.ಎಲ್.ಸಿಗಳಾದ ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್, ಜಿಲ್ಲಾಧಿಕಾರಿ  ಮುಲ್ಲೈ ಮುಗಿಲನ್, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್, ಎಸ್.ಪಿ ರಿಷ್ಯ್ಂತ್, ಎ.ಸಿ ಗಿರೀಶ್ ನಂದನ್, ಲಾಯಿಲ ಗ್ರಾ.ಪಂ ಅಧ್ಯಕ್ಷೆ ಆಶಾ ಬೆನೆಡಿಕ್ಟ್ ‌ಡಿ.ಸೋಜಾ, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್ ಮೊದಲಾದವರು ಉಪಸ್ಥಿತರಿದ್ದರು. ತಹಶೀಲ್ದಾರ್ ಸುರೇಶ್ ಕುಮಾರ್ ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನು ವಿತರಿಸಲಾಯಿತು. ಸಚಿವರು ಸಾವ೯ಜನಿಕರ ಅಹವಾಲು ಸ್ವೀಕರಿಸಿದರು.

ಈ ಸಂದಭ೯ದಲ್ಲಿ ಎಂ.ಎಲ್.ಸಿ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ, ಬೆಳ್ತಂಗಡಿ ಉಸ್ತುವಾರಿ ಸಾಹಿದ್ ತೆಕ್ಕಿಲ್, ಕೇಶವ ಗೌಡ, ಅಬ್ದುಲ್ ರಹಿಮಾನ್ ಪಡ್ನೂರು, ಸುಂದರ ಗೌಡ, ಎ.ಸಿ ಮ್ಯಾಥ್ಯೂ, ಶ್ರೀಧರ್ ಭಿಡೆ, ರಾಜಶೇಖರ ಶೆಟ್ಟಿ ಉಪಸ್ಥಿತರಿದ್ದರು.

ಬಾಲಕೃಷ್ಣ ಗೌಡ ಕೇರಿಮಾರ್ ಕಾಯ೯ಕ್ರಮ ನಿರೂಪಿಸಿದರು.

Related posts

ಬಳಂಜ: ಅನಾರೋಗ್ಯದಿಂದ ವರದರಾಜ್ ಪೂಜಾರಿ ನಿಧನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

Suddi Udaya

ಧರ್ಮಸ್ಥಳ: ಉಪರಾಷ್ಟ್ರಪತಿ ಭೇಟಿ ಹಿನ್ನಲೆ; ನೋ ಫ್ಲೈ ಝೋನ್ /ನೋ ಡ್ರೋನ್ ಝೋನ್ ಆದೇಶ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!