September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

ಬೆಳ್ತಂಗಡಿ : ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 104 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ ಜು.8ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿ ಪುರಾಣದಿಂದ ಆಧುನಿಕ ವಿಜ್ಞಾನದವರೆಗೆ ಪ.ರಾಮಕೃಷ್ಣ ಶಾಸ್ತ್ರಿಯವರು ಅಧ್ಯಯನ ಮಾಡಿದ್ದಾರೆ ಎಂದರು.ಅಧ್ಯಕ್ಷತೆಯನ್ನು ಜನಪದ ವಿವಿ ಹಾವೇರಿಯ ವಿಶ್ರಾಂತ ಕುಲಪತಿ ಡಾ| ಕೆ. ಚಿನ್ನಪ್ಪ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್, ಪಾವಂಜೆ ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ. ಶಶೀಂದ್ರ ಕುಮಾರ್, ಅಭಿನಂದಿತರಾಗುವ ಪ.ರಾಮಕೃಷ್ಣ ಶಾಸ್ತ್ರಿಮಚ್ಚಿನ, ಅವರ ಪತ್ನಿ ಶಾರದಾ ಆರ್. ಶಾಸ್ತ್ರಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಲಕ್ಷ್ಮೀ ಮಚ್ಚಿನ ಬರೆದ ಬದುಕು ಬರಹ ಬವಣೆ: ಪ. ರಾಮಕೃಷ್ಣ ಶಾಸ್ತ್ರಿಹೆಜ್ಜೆ ಗುರುತುಗಳು, ಪ. ರಾಮಕೃಷ್ಣ ಶಾಸ್ತ್ರಿ ಅವರು ಬರೆದ – ಮಳೆ ಮಳೆ (ಲೇಖನಗಳ ಸಂಗ್ರಹ), ನಟನ ಮನೋಹರಿ (ಕಾದಂಬರಿ), ರೋಚಕ ಲೋಕ (ತರಂಗ ಲೇಖನಗಳ ಸಂಗ್ರಹ), ಪ್ರಪಂಚದ ಸೋಜಿಗಗಳು (ತರಂಗ ಲೇಖನಗಳ ಸಂಗ್ರಹ) ಪುಸ್ತಕಗಳು ಬಿಡುಗಡೆ ಮಾಡಲಾಯಿತು.ಕುರಿಯ ವಿಠಲಶಾಸ್ತ್ರಿಸಾಂಸ್ಕೃತಿಕ ಪ್ರತಿಷ್ಠಾನ ಸಂಚಾಲಕರು ಎನ್. ಅಶೋಕ ಭಟ್ ಉಜಿರೆ ಅಭಿನಂದನಾ ನುಡಿಗಳನ್ನಾಡಿದರು.ಪ.ರಾಮಕೃಷ್ಣ ಶಾಸ್ತ್ರಿ ಅಭಿನಂದನಾ ಸಮಿತಿ ಸಂಚಾಲಕ ಸಂಪತ್ ಬಿ. ಸುವರ್ಣ ಸ್ವಾಗತಿಸಿದರು.ನ್ಯಾಯವಾದಿ ಧನಂಜಯ್ ರಾವ್ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಶಾಸ್ತ್ರಿಯವರ ಒಡನಾಡಿಗಳು, ಆತ್ಮೀಯರು, ಬಂಧುಗಳು, ಸಾಹಿತ್ಯದ ಪರಿಚಾರಕರು, ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya
error: Content is protected !!