September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜು. 9ರಂದು ಬೆಳ್ತಂಗಡಿ ತಾಲೂಕಿನ ಪುರುಷರ ಮಜಲು ಪರಿಸರದಲ್ಲಿ ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಮತ್ತು ಉಪರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್, ವೈ.ಕೆ. ಸಸಿಗಳನ್ನು ವಿತರಿಸಿದರು.ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಸ್ವಾಗತಿಸಿದರು. ಯೋಜನಾ ನಿರ್ದೇಶಕ ಅನಿಲ್ ಕುಮಾರ್, ಕಾಸಿಂ ಮಲ್ಲಿಗೆಮನೆ, ಪ್ರಭಾಕರ ಗೌಡ ಪೋಸಂದೋಡಿ, ವಿವೇಕ್ ವಿನ್ಸಂಟ್ ಪಾಯಿಸ್, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಈ ವರ್ಷ ಹತ್ತು ಲಕ್ಷಕ್ಕೂ ಮಿಕ್ಕಿ ಸಸಿಗಳನ್ನು ನಾಟಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ 4500 ಗಿಡಗಳನ್ನು ನಾಟಿ ಮಾಡಲಾಯಿತು. ರಾಜ್ಯದೆಲ್ಲೆಡೆ ಈಗಾಗಲೆ 4332 ಕಾರ್ಯಕ್ರಮಗಳ ಮೂಲಕ 2,40,399 ಹಣ್ಣುಹಂಪಲಿನ ಗಿಡಗಳನ್ನು ಹಾಗೂ 5,27,898 ಇತರ ಗಿಡಗಳನ್ನು 4300 ಎಕ್ರೆ ಪ್ರದೇಶದಲ್ಲಿ ನಾಟಿ ಮಾಡಲಾಗಿದೆ. ಇದಕ್ಕಾಗಿ 36 ಲಕ್ಷ ರೂ. ಅನುದಾನ ವಿನಿಯೋಗಿಸಲಾಗಿದೆ.

Related posts

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!