24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಸತತ ಮೂರು ಬಾರಿ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ 22ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ ಡಿಸೋಜಾ ಕಾಂಪ್ಲೆಕ್ಸ್ ಸೋಮಂತಡ್ಕದಲ್ಲಿ ಜುಲೈ 9ರಂದು ನಡೆಯಿತು.

ವಿಧಾನಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ಶಾಖೆಯ ಕಚೇರಿ ಉದ್ಘಾಟಿಸಿ ಗ್ರಾಮೀಣ ಪ್ರದೇಶದಲ್ಲಿ ಹಣಕಾಸು ಸಂಸ್ಥೆ ಜಾಸ್ತಿಯಾದಂತೆ, ವ್ಯವಹಾರವು ಜಾಸ್ತಿಯಾಗುತ್ತದೆ. ಇದರಿಂದ ಕೃಷಿಕರಿಗೆ,ಉದ್ದಿಮೆಗಳನ್ನು ನಡೆಸಲು ಸುಲಭದಲ್ಲಿ ಸಾಲ ಸೌಲಭ್ಯ ಸಿಗುತ್ತಿದೆ. ಸಂಸ್ಥೆಯು ಉತ್ತಮ ರೀತಿಯಲ್ಲಿ ಮುನ್ನಡೆಯಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸುಳ್ಯ ಇದರ ಅಧ್ಯಕ್ಷ ಪಿ.ಸಿ ಜಯರಾಮ್ ವಹಿಸಿದ್ದರು.

ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಪೋಷಕರಾದ ಶ್ರೀಮತಿ ಲೋಕೇಶ್ವರಿ ವಿನಯಚ್ಚಂದ್ರ, ಮರೈನ್ ನಿವೃತ ಮುಖ್ಯ ಅಭಿಯಂತರರಾದ ಡಿ‌.ಯಂ.ಗೌಡ, ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರಂಜಿನಿ ಆರ್, ಬೆಳ್ತಂಗಡಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪಿ ತಿಮ್ಮಪ್ಪ ಗೌಡ ಬೆಳಾಲು, ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ತಜ್ಞರಾದ ಡಾ.ಚಂದ್ರಕಾಂತ್, ಡಿ.ಸೋಜಾ ಕಾಂಪ್ಲೇಕ್ಸ್ ಮಾಲಕ ಹೆನ್ರಿ ಡಿಸೋಜಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಮೋಹನ್ ರಾಂ ಸುಳ್ಳಿ,ನಿರ್ದೇಶಕರಾದ ಜಾಕೆ ಸದಾನಂದ,ನಿತ್ಯಾನಂದ ಮುಂಡೋಡಿ,ಎ.ವಿ ತೀರ್ಥ ರಾಮ,ಚಂದ್ರಾ ಕೋಲ್ಚಾರ್,ಕೆ.ಸಿ ನಾರಾಯಣ ಗೌಡ,ಕೆ.ಸಿ ಸದಾನಂದ, ಪಿ‌.ಎಸ್ ಗಂಗಾಧರ,ದಿನೇಶ್ ಮಡಪ್ಪಾಡಿ, ದಾಮೋದರ ಎನ್.ಎಸ್, ಜಯಲಲಿತ ಕೆ.ಎಸ್,ನಳಿನಿ ಸೂರಯ್ಯ,ಲತಾ ಎಸ್ ಮಾವಜಿ, ಹೇಮಚಂದ್ರ ಐ‌.ಕೆ,ಶೈಲೇಶ್ ಅಂಬೆಕಲ್ಲು, ನವೀನ್ ಕುಮಾರ್ ಜೆ.ವಿ ಹಾಗೂ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಕೆ.ಟಿ ವಿಶ್ವನಾಥ, ಬ್ರಾಂಚ್ ಮ್ಯಾನೇಜರ್ ಯೋಗೀಶ್ ಹಾಗೂ ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು.

ಗ್ರಾಹಕರಿಗೆ ಪ್ರಥಮ ಪಾಲು ಪತ್ರ,ಪ್ರಥಮ ಠೇವಣಿ ಪತ್ರ,ಪ್ರಥಮ ಉಳಿತಾಯ ಖಾತೆ ಪುಸ್ತಕ ವಿತರಣೆ ಮಾಡಲಾಯಿತು.ಪೂಜಾ, ಅನುಪಮ, ಶರಣ್ಯ ಪ್ರಾರ್ಥನೆ ಹಾಡಿದರು.

Related posts

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!