ಕೊಕ್ಕಡ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಅಧ್ಯಕ್ಷ ಯೋಗೀಶ್ ಆಲಂಬಿಲ ರವರ ಅಧ್ಯಕ್ಷತೆಯಲ್ಲಿ ಜು.10 ರಂದು ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖಾ ಜಾನುವಾರು ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಜೈನ್ ಗ್ರಾಮಸಭೆಯನ್ನು ಮುನ್ನಡೆಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಪವಿತ್ರಾ , ಪಂ ಕಾರ್ಯದರ್ಶಿ ಭಾರತಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆ , ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ, ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಅಣ್ಣನಿಗೆ ಹಾವು ಕಚ್ಚಿದಾಗ ತಮ್ಮ ವಿಷವನ್ನು ಬಾಯಿಂದ ಹೀರಿ ತೆಗೆದು ಪ್ರಾಣ ಉಳಿಸಿದಕ್ಕೆ ಗಣೇಶ್ ಕುರ್ಲೆ ಇವರಿಗೆ ಗ್ರಾ.ಪಂ. ನಿಂದ ಸನ್ಮಾನ ಮಾಡಲಾಯಿತು.
ಪಂ. ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಸ್ವಾಗತಿಸಿ, ವಾರ್ಡ್ ಸಭೆಗಳಲ್ಲಿ ಬಂದ ಪ್ರಸ್ತಾವನೆ ಬಗ್ಗೆ ವರದಿ ವಾಚಿಸಿದರು.