ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಪೆರಿಂಜೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪೇಪರ್ ಪೆನ್ ತಯಾರಿ ಕಾರ್ಯಾಗಾರ ನಡೆಸಲಾಯಿತು.

ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕಾಗುವ ಹಾನಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಪೇಪರ್ ನಲ್ಲಿ ಸಸ್ಯಗಳ ಬೀಜಗಳನ್ನು ಬಳಸಿ ಪರಿಸರ ಸ್ನೇಹಿ ಪೆನ್ನು ತಯಾರಿಸಿ ಸಂಭ್ರಮಪಟ್ಟರು.

ಶಾಲೆಯ ಆವರಣದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕುಮಾರಿ ಕನಿಷ್ಕ ಇವರ ಹುಟ್ಟಿದ ಹಬ್ಬವನ್ನು ಪೌಷ್ಟಿಕ ಆಹಾರಗಳನ್ನು ಬಳಸಿ ವಿಶೇಷವಾಗಿ ಆಚರಿಸಲಾಯಿತು. ಪರಿಸರ ಪ್ರೇಮಿ ಜಯಪ್ರಕಾಶ್ ಕಾರ್ಯಾಗಾರ ನಡೆಸಿಕೊಟ್ಟರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಪ್ರಭಾ, ಶಿಕ್ಷಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Comment

error: Content is protected !!