September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

ಪೆರಿಂಜೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪೇಪರ್ ಪೆನ್ ತಯಾರಿ ಕಾರ್ಯಾಗಾರ ನಡೆಸಲಾಯಿತು.

ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕಾಗುವ ಹಾನಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಪೇಪರ್ ನಲ್ಲಿ ಸಸ್ಯಗಳ ಬೀಜಗಳನ್ನು ಬಳಸಿ ಪರಿಸರ ಸ್ನೇಹಿ ಪೆನ್ನು ತಯಾರಿಸಿ ಸಂಭ್ರಮಪಟ್ಟರು.

ಶಾಲೆಯ ಆವರಣದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕುಮಾರಿ ಕನಿಷ್ಕ ಇವರ ಹುಟ್ಟಿದ ಹಬ್ಬವನ್ನು ಪೌಷ್ಟಿಕ ಆಹಾರಗಳನ್ನು ಬಳಸಿ ವಿಶೇಷವಾಗಿ ಆಚರಿಸಲಾಯಿತು. ಪರಿಸರ ಪ್ರೇಮಿ ಜಯಪ್ರಕಾಶ್ ಕಾರ್ಯಾಗಾರ ನಡೆಸಿಕೊಟ್ಟರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಪ್ರಭಾ, ಶಿಕ್ಷಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ

Suddi Udaya

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya
error: Content is protected !!