ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿ ತ್ಯಾಗರಾಜ್ ಅವರ ಅಮಾನತು ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಬೆಂಗಳೂರು (ಕೆಎಟಿ) ತಡೆ ನೀಡಿದ್ದು, ಅವರು ಜು.11ರಂದು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿರುವುದಾಗಿ ವರದಿಯಾಗಿದೆ.
ಕಳೆದ ಒಂದೂವರೆ ವರ್ಷದ ಹಿಂದೆ ಕಲ್ಮಂಜ ಗ್ರಾಮದಲ್ಲಿ ನಡೆದ ಮರಗಳ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆಯಲ್ಲಿ ವಲಯ ಅರಣ್ಯಾಧಿಕಾರಿಗಳಾದ ತ್ಯಾಗರಾಜ್ ಅವರು ಕರ್ತವ್ಯ ಲೋಪ ಎಸಗಿರುವುದು ಕಂಡ ಬಂದ ಹಿನ್ನಲೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರು ಅವರನ್ನು ಅಮಾನತು ಗೊಳಿಸಿ ಆದೇಶ ಹೊರಡಿಸಿದ್ದರು.
ಈ ಆದೇಶದ ವಿರುದ್ಧ ತ್ಯಾಗರಾಜ್ ಅವರು ಕರ್ನಾಟಕ ರಾಜ್ಯ ಆಡಳಿತ ನ್ಯಾಯಾಲ ಮಂಡಳಿಯಲ್ಲಿ ಮೇಲ್ಮನವಿ ಸಲ್ಲಿಸಿ, ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಸ್ವೀಕರಿಸಿದ ಕೆಇಟಿ ಮುಂದಿನ ವಿಚಾರಣೆ ದಿನಾಂಕದವರೆಗೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಾಧಿಕಾರಿಯವರು ಮಾಡಿರುವ ಆದೇಶಕ್ಕೆ ತಡೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ತ್ಯಾಗರಾಜ್ ಅವರು ಮತ್ತೆ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.