38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

ಬೆಳ್ತಂಗಡಿ: ಬಜಿರೆ‌ ಗ್ರಾಮದ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರದೀಪ್ ಕುಮಾರ್ ಹೆಗ್ಡೆ ಅಧ್ಯಕ್ಷರು, ಕೊರಗಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು , ಇವರು‌ ನೀಡಿದ ದೂರಿನಲ್ಲಿ ‌ಏನೀದೆ..? :
ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ಸರಕಾರಿ ಜಮೀನಿನಲ್ಲಿ ಇದ್ದುದನ್ನು ಊರಿನ ಹತ್ತು ಸಮಸ್ತರು ಸೇರಿಕೊಂಡು ಆರಾಧಿಸಿಕೊಂಡು ಬರುತ್ತಿದ್ದು, ಸದ್ರಿ ಕೊರಗಜ್ಜ ಕಟ್ಟೆಯನ್ನು ಹರೀಶ್ ಮತ್ತು ಇತರರು ಸೇರಿಕೊಂಡು ಊರಿನ ಸಾರ್ವಜನಿಕ ಭಕ್ತಾಧಿಗಳಿಗೆ ತಿಳಿಸದೆ ತಮ್ಮ ಸ್ವಂತ ಸ್ಥಳಕ್ಕೆ ಕೊಂಡು ಹೋಗಿ ಪ್ರತಿಷ್ಠಾಪನೆ ಮಾಡಿದ್ದು, ತದನಂತರ ಡಾ. ರಾಜೇಶ್ ಮತ್ತಿತ್ತರರು ಜು.11 ರಂದು ವಿವಾದಿತ ಕೊರಗಜ್ಜ ಕಟ್ಟೆಯನ್ನು ಕೆಡವಿ ಹೊಸದಾಗಿ ಕೆಸರು ಕಲ್ಲು ಹಾಕಲು ಯತ್ನಿಸಿದ್ದು, ಆ ಸಮಯ ಪ್ರದೀಪ್ ಕುಮಾರ್ ಹೆಗ್ಡೆ ಮತ್ತು ಇತರ ಭಕ್ತಾಧಿಗಳು ಆಕ್ಷೇಪ ವ್ಯಕ್ತ ಪಡಿಸಿದ್ದರು .ಡಾ. ರಾಜೇಶ್ ರವರು ಅವರ ಸ್ವಂತ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡಿದ ಬಳಿಕ ಹಳೆಯ ಕೊರಗಜ್ಜ ಕಟ್ಟೆಯನ್ನು ಪ್ರದೀಪ್ ಕುಮಾರ್ ಹೆಗ್ಡೆ ಮತ್ತು ಇತರ ಸಾರ್ವಜನಿಕ ಭಕ್ತರು ಚಪ್ಪರ ಹಾಕಿ ಆರಾಧಿಸಿಕೊಂಡು ಬರುತ್ತಿದ್ದುದಕ್ಕೆ ಜು. 11 ರಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ ಹರೀಶ್ ಪೂಜಾರಿ ಎಂಬವರು ಇತರಾದ ಡಾ.ರಾಜೇಶ್ , ರಮೇಶ್ ಕುಡ್ಮೇರು, ಓಂ ಪ್ರಕಾಶ್, ಮತ್ತು ಪ್ರಶಾಂತ್ ರವರ ಕುಮ್ಮಕ್ಕಿನಿಂದ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿ ಮತ್ತು ಇತರ ಸಾರ್ವಜನಿಕ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿರುತ್ತಾರೆ ಎಂದು ಆರೋಪಿಸಿದ್ದರು.
ದೂರನ್ನು ಸ್ವೀಕರಿಸಿದ ವೇಣೂರು ಪೊಲೀಸರು ಠಾಣಾ ಅಕ್ರ 39/2023 ಕಲಂ: 295(A) ,436,109 ಜೊತೆಗೆ 34 ಐ.ಪಿ.ಸಿ ಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ . ಸ್ಥಳಕ್ಕೆ ಡಿವೈಎಸ್ಪಿ ಗಾನ ಕುಮಾರ್, ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಕುಮಾರ್, ಎಸ್.ಐ ಸೌಮ್ಯ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಜಾರಿ ಅವರನ್ನು ಪೊಲೀಸರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!