September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

ಬೆಳ್ತಂಗಡಿ :ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಬೆಳ್ತಂಗಡಿ 2023-24 ರ ವರ್ಷದ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ ಜು.12 ರಂದು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಇವರ ಘನ ಅಧ್ಯಕ್ಷತೆಯಲ್ಲಿ ನೆರವೇರಿತು.
ವಾಣಿ ಶಿಕ್ಷಣ ಸಂಸ್ಥೆಯ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರಾದ ನಾರಾಯಣ ಗೌಡ ಇವರು ದೀಪವನ್ನು ಬೆಳಗಿಸಿ ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಪ್ರಜಾಪ್ರಭುತ್ವ ವ್ಯವಸ್ಥೆಯ ಅರಿವನ್ನು ನೀಡುವುದರಿಂದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಲು ಸಹಕಾರಿಯಾಗಬಲ್ಲದು, ಶಿಸ್ತು, ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿ ವಿದ್ಯಾರ್ಥಿ ಜೀವನದಲ್ಲಿ ಸಾಗುವಂತಾಗಬೇಕು ಎಂದು ಹಿತವಚನ ನೀಡಿದರು.
ಮುಖ್ಯ ಅತಿಥಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಜೊತೆ ಕಾರ್ಯದರ್ಶಿ ಕೆ. ಎಮ್. ಶ್ರೀನಾಥ್ ಭಾಗವಹಿಸಿ ನೂತನ ಮಂತ್ರಿಮಂಡಲ ಪದಾಧಿಕಾರಿಗಳಿಗೆ ಶುಭಹಾರೈಸಿದರು.
ಸಮಾರಂಭದಲ್ಲಿ ಬೆಂಗಳೂರು ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಥಮ ಸ್ಥಾನದೊಂದಿಗೆ ಬಿ.ಡಿ.ಎಸ್ ಪದವಿಯನ್ನು ಪೂರೈಸಿದ ಶಾಲಾ ಹಳೆವಿದ್ಯಾರ್ಥಿನಿ ಡಾ. ಅನುದೀಕ್ಷಾ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಳೆದ ಶಾಲಾ ದಿನಗಳನ್ನು ನೆನಪಿಸಿಕೊಳ್ಳುತ್ತಾ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷರಾದ ಮುಖ್ಯೋಪಾಧ್ಯಾಯರು ಲಕ್ಷ್ಮೀನಾರಾಯಣ ಕೆ. ಇವರು ಪ್ರಮಾಣ ವಚನ ಭೋದಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಕಲ್ಪನೆ ಹಾಗೂ ಎಳವೆಯಲ್ಲಿ ನಾಯಕತ್ವ ಗುಣಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಲು ನೂತನ ಮಂತ್ರಿಮಂಡಲದ ವ್ಯವಸ್ಥೆಯು ಸಹಕಾರಿಯಾಗುತ್ತದೆ ವಿದ್ಯಾರ್ಥಿಗಳು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತಾಗಬೇಕೆಂದು ಆಶಯವನ್ನು ವ್ಯಕ್ತಪಡಿಸಿದರು.


ವೇದಿಕೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿಯಾದ ಪ್ರಸಾದ್ ಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ, ಶ್ರೀಮತಿ ಸುಹಾಸಿನಿ. ಎ, ಮಂತ್ರಿಮಂಡಲದ ರಚನೆಯ ನಿರ್ವಹಣೆ ಮಾಡಿದ ಶಿಕ್ಷಕರಾದ ಹರಿಪ್ರಸಾದ್ ಮತ್ತು ಶ್ರೀಮತಿ ಮಮತಾ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಸಮಾರಂಭ ಪ್ರಾರಂಭಗೊಂಡಿತು. 10ನೇ ತರಗತಿ ವಿಧ್ಯಾರ್ಥಿನಿ ಕು. ತೃಪ್ತಿ, ಸ್ವಾಗತಿಸಿ,10ನೇ ತರಗತಿ ವಿಧ್ಯಾರ್ಥಿನಿ ಕು. ಅಭಿಜ್ಞಾ ವಂದನಾರ್ಪಣೆಗೈದರು. 9ನೇ ತರಗತಿ ವಿಧ್ಯಾರ್ಥಿನಿ ಕು. ಮಾನ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

Suddi Udaya
error: Content is protected !!