ಲಾಯಿಲ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಲಾಯಿಲ ಕರ್ನೋಡಿಯಲ್ಲಿ ಮಕ್ಕಳ ಹಕ್ಕುಗಳ ಸಂಘವನ್ನು ಜು.12ರಂದು ಉದ್ಘಾಟಿಸಲಾಯಿತು..
ಸಂಘದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ಜಗನ್ನಾಥ ಎಮ್ ಮಾತಾಡಿ ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಸಂಘದ ಸದುಪಯೋಗವನ್ನು ಪಡೆದುಕೊಳ್ಳಬೇಕು, ಸಂಘದ ಚಟುವಟಿಕೆಗಳ ಮೂಲಕ ದೊರಕುವ ಅವಕಾಶವನ್ನು ಬಳಸಿಕೊಂಡು ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದರು.

ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಕ್ಕಳ ಹಕ್ಕುಗಳ ಸಂಘದ ಸಂಯೋಜಕರಾದ ಚೈಲ್ಡ್ ರೈಟ್ಸ್ ಟ್ರಸ್ಟ್ ನ ವಿನೋದ್ ಪ್ರಸಾದ್ ಕಲ್ಲಾಜೆ , ಮಕ್ಕಳ ಹಕ್ಕುಗಳ ಸಂಘದ ವಾರ್ಷಿಕ ಚಟುವಟಿಕೆಗಳ ಕುರಿತು ಹಾಗೂ ವಿದ್ಯಾರ್ಥಿಗಳಿಗೆ ದೊರಕುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ “ಮಕ್ಕಳ ಹಕ್ಕುಗಳ ಜಾರಿಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್” ಪುಸ್ತಕವನ್ನು ವಿತರಿಸಲಾಯಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಸಂಘದ ಮಾರ್ಗದರ್ಶಿ ಅಧ್ಯಾಪಕರಾದ ಕೃಷ್ಣಕುಮಾರ್ ಹಾಗೂ ಅಧ್ಯಾಪಕಿಯರಾದ ಉಷಾ.ಕೆ , ಗಂಗಾರಾಣಿ ನಾ.ಜೋಶಿ ಉಪಸ್ಥಿತರಿದ್ದರು.