ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿನ ಕುರಿತು ಪರಾಮರ್ಶೆ ಸಭೆ ಜು.14 ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ಇರುವ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದಿದ್ದು ಸಭೆಯಲ್ಲಿ ಸತ್ಯಶೋಧನಾ ಸಮಿತಿಯವರ ಎದುರೇ ಕಾಂಗ್ರೆಸ್ ಪಕ್ಷದ ಎರಡು ಬಣಗಳ ನಡುವೆ ಮಾತಿನ ಚಕಮಕಿ, ಪರಸ್ಪರ ಆರೋಪ-ಪ್ರತ್ಯಾರೋಪಗಳು ನಡೆದ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷದ ಸೋಲಿನ ಪರಾಮರ್ಶೆ ನಡೆಸಲು ಸತ್ಯಶೋಧನಾ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಸದಸ್ಯರಾದ ಶಕುಂತಳಾ ಶೆಟ್ಟಿ, ಮಮತಾ ಗಟ್ಟಿ, ಅಶ್ವಿನ್ ಕುಮಾರ್ ಆಗಮಿಸಿದ್ದರು.

ಸಭೆಯಲ್ಲಿ ಪಕ್ಷದ ಸೋಲಿಗೆ ಕಾರಣಗಳ ಬಗ್ಗೆ ಸಮಿತಿಯವರು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಂದ ವಿವರಗಳನ್ನು ಪಡೆದು ಅಂತಿಮ ವರದಿ ಪಕ್ಷದ ವರಿಷ್ಠರಿಗೆ ಸಲ್ಲಿಸಬೇಕಾಗಿತ್ತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜನ್ ಜಿ ಗೌಡ, ಶೈಲೇಶ್ ಕುಮಾರ್, ಕೆಪಿಸಿಸಿ ಸದಸ್ಯರಾದ ಕೇಶವ್ ಪಿ ಬೆಳಾಲ್ ಯುವ ಮುಖಂಡ ಹರೀಶ್ ಕುಮಾರ್, ಎ ಸಿ ಮ್ಯಾಥ್ಯ, ರಾಜಶೇಖರ ಅಜ್ರಿ ಮುಂತಾದವರು ಸಭೆಯಲ್ಲಿದ್ದರು,ಸಮಿತಿಯವರು ಅಪ್ರಾಭಿಯಗಳನ್ನು ಪಡೆಯುತ್ತಿರುವ ಸಮಯ ಕಾಂಗ್ರೆಸ್‌ನ ಅಭ್ಯರ್ಥಿಯ ಸೋಲಿನ ಬಗ್ಗೆ ಪ್ರಸ್ತಾಪವಾಗಿ ಎರಡು ಬಣಗಳ ನಡುವೆ ಮುಖಂಡರೇ ಎದುರೇ ಮಾತಿನ ಚಕಮಕಿ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಅಭಿನಂದನ್ ಹಾಗೂ ರಕ್ಷಿತ್ ಶಿವರಾಂ ಬಣದ ಪ್ರವೀಣ್ ಫೆರ್ನಾಂಡೀಸ್, ಸಚಿನ್ ನೂಜೋಡಿ, ನವೀನ್, ರಾಜೇಶ್ ಭಟ್ ಸವಣಾಲು ಮೊದಲಾದವರ ನಡುವೆ ಮಾತಿನ ಚಕಮಕಿ ನಡೆದು ಹೊಕೈ ಹಂತದವರೆಗೆಗೂ ತಲುಪಿತ್ತು. ಪಕ್ಷದ ಮುಖಡಂರು ಎರಡು ಕಡೆಯವರನ್ನು ಸಮಾಧಾನ ಪಡಿಸಿದ ಬಳಿಕ ಸಮತಿಯವರು ಅಭಿಪ್ರಾಯಗಳನ್ನು ಪಡೆದುಕೊಂಡರು.

Leave a Comment

error: Content is protected !!