September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಜು.13 ರಂದು ಆಚರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸ್ಥಳೀಯ ಪ್ರಗತಿಪರ ಕೃಷಿಕರು, ಬೊಳ್ಮ ನಾರ್ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ್ ಏನ್ ಪಿ ಉಪಸ್ಥಿತರಿದ್ದು ಶಾಲೆಯಲ್ಲಿ ಸಾಂಕೇತಿಕವಾಗಿ ತೆಂಗಿನ ಸಸಿಯನ್ನು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ಪ್ರತಿಯೊಂದು ಮಗು ಮನೆಯಲ್ಲಿ ವರ್ಷದಲ್ಲಿ ಕನಿಷ್ಠ ಒಂದು ಗಿಡವನ್ನಾದರೂ ನೆಟ್ಟು ಪೋಷಣೆಯನ್ನು ಮಾಡಿದರೆ ಈ ವನಮಹೋತ್ಸವ ಕಾರ್ಯಕ್ರಮಕ್ಕೆ ಗೌರವವನ್ನು ಸೂಚಿಸಿದಂತೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪಗೌಡರವರು ವನಮಹೋತ್ಸವದಲ್ಲಿ ಶಾಲೆಯಲ್ಲಿ ಇರುವಂತಹ ಗಿಡಮರಗಳನ್ನು, ಮನೆಯಲ್ಲಿ ನೆಟ್ಟು ಬೆಳೆಸಿದಂತ ಗಿಡ ಮರಗಳನ್ನು ಒಳ್ಳೆಯ ರೀತಿಯಲ್ಲಿ ಪಾಲನೆ ಪೋಷಣೆ ಮಾಡುವುದರ ಮೂಲಕ ವಿದ್ಯಾರ್ಥಿಗಳೆಲ್ಲರೂ ಕೂಡ ವನಮಹೋತ್ಸವವನ್ನು ಮನೆಯಲ್ಲಿ ಕೂಡ ಆಚರಿಸಬೇಕೆಂದು ತಿಳಿಸಿದರು.

ಶಾಲೆಯ ಶಿಕ್ಷಕಿಯಾದ ಶ್ರೀಮತಿ ಶೀಲಾ ಎನ್. ಮಾತನಾಡಿ ವನಮಹೋತ್ಸವ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ವನಮಹೋತ್ಸವದ ಕುರಿತಂತೆ ಭಾಷಣ ಹಾಗೂ ಗೀತೆಗಳನ್ನು ಹಾಡಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನ ಗೀತೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮದಲ್ಲಿ ನಿಶಾಂತ್ ಕುಮಾರ್ ಸ್ವಾಗತಿಸಿ, ಶ್ರೀಮತಿ ಪುಷ್ಪಲತಾ ಧನ್ಯವಾದ ಗೈದ ಕಾರ್ಯಕ್ರಮವನ್ನು ಶ್ರೀಮತಿ ಸುಜಾತ ಬಿ ರವರು ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya

ನಡ ಪರಿಸರದಲ್ಲಿ ಎರಡು ದಿನಗಳಲ್ಲಿ 4 ಕಾಡಂದಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ; ಮಿದುಳು ಜ್ವರದಿಂದ ಸಾವು ಸ್ಥಳೀಯರ ಶಂಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya
error: Content is protected !!