22.7 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

ಉಜಿರೆ: ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆಯಲ್ಲಿ ಮಕ್ಕಳ ಹಕ್ಕುಗಳ ಸಂಘವನ್ನು ಜು.13ರಂದು ಉದ್ಘಾಟಿಸಲಾಯಿತು.

ಸಂಘದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ತ್ರಿವೇಣಿ ಬಾಯಿ ಮಕ್ಕಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಕ್ಕಳ ಹಕ್ಕುಗಳ ಸಂಘದ ಸಂಯೋಜಕರಾದ ಚೈಲ್ಡ್ ರೈಟ್ಸ್ ಟ್ರಸ್ಟ್ ನ ವಿನೋದ್ ಪ್ರಸಾದ್ ಕಲ್ಲಾಜೆ , ಮಕ್ಕಳ ಹಕ್ಕುಗಳ ಸಂಘದ ವಾರ್ಷಿಕ ಚಟುವಟಿಕೆಗಳನ್ನು ವಿವರಿಸಿ ಸದಸ್ಯರಿಗೆ ಸಂಘದ ಸ್ಥೂಲ ಪರಿಚಯ ಮಾಡಿಕೊಟ್ಟು ಅವಕಾಶಗಳ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ “ಮಕ್ಕಳ ಹಕ್ಕುಗಳ ಜಾರಿಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್” ಪುಸ್ತಕವನ್ನು ವಿತರಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕರಾದ ಶಂಭುಶಂಕರ್ , ಸುಮ.ಪಿ, ಶಾರದಾ ಮರಾಠೆ ಹಾಗೂ ನಾರಾಯಣ ಗೌಡ ಉಪಸ್ಥಿತರಿದ್ದರು.

Related posts

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!