ಬಂದಾರು :ರಾಷ್ಟ್ರಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಗುರುತಿಸಿಕೊಂಡಿರುವ ಹೆಮ್ಮೆಯ ಬಂದಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಲ್ಲಿ ಅಡಿಕೆ ತೋಟ ನಿರ್ಮಾಣವಾಗಿದ್ದು ಈ ತೋಟದಲ್ಲಿ ಕಳೆ ಕೀಳುವುದು, ಅಡಿಕೆ ಗಿಡಕ್ಕೆ ಸೊಪ್ಪು ಹಾಕುವ ಕೆಲಸವೂ ಶ್ರಮದಾನದ ಮೂಲಕ ಶಾಲಾಭಿವೃದ್ಧಿ ಸಮಿತಿ, ಪೋಷಕ ವೃಂದ ಹಾಗೂ ಹಳೇವಿದ್ಯಾರ್ಥಿ ಸಂಘದ ಒಗ್ಗೂಡುವಿಕೆಯಲ್ಲಿ ಜು.13 ರಂದು ನೆರವೇರಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಉಮೇಶ್ ಗೌಡ ಪೋಯ್ಯೋಲೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಂದರ ಗೌಡ ನಿನ್ನಿಕಲ್ಲು, ಶಾಲಾ ಮುಖ್ಯ ಶಿಕ್ಷಕರಾದ ಮಂಜ ನಾಯ್ಕ್.ಸಿ ಹಾಗೂ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೇವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪೋಷಕ ವೃಂದದವರು ಉಪಸ್ಥಿತರಿದ್ದರು.
