38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

ಮಂಗಳೂರು : ರೋಟರಿ ಮಂಗಳೂರು ಪೂರ್ವ ಇದರ 2023-24 ರ ಸಾಲಿನ‌ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ನಗರದ ಮೋತಿಮಹಲ್ ಹೋಟೆಲಿನ ಸಭಾ ಭವನದಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಜಿಲ್ಲೆ 3181 ರ 2025-26ರ ಸಾಲಿನ ನಿಯೋಜಿತ ಜಿಲ್ಲಾ ಗವರ್ನರ್ ರಾಮಕೃಷ್ಣರವರು ಪದಗ್ರಹಣ ನೆರವೇರಿಸಿದರು.

ಮುಂಡಾಡಿಗುತ್ತು ಜಯರಾಮ‌ ಶೆಟ್ಟಿ ಅಧ್ಯಕ್ಷರಾಗಿಯೂ, ಮಾಜಿ ಸಹಾಯ ಗವರ್ನರ್ ಸದಾಶಿವ ಶೆಟ್ಟಿಯವರು ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಅಧ್ಯಕ್ಷ ಸಿ.ಎ ಹರೀಶ್ ಶೆಟ್ಟಿಯವರು ಸ್ವಾಗತಿಸಿ ಕಳೆದ ವರ್ಷ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ನಿರ್ಗಮನ ಕಾರ್ಯದರ್ಶಿ ಜೋಯಲ್ ಸಲ್ದಾನ ಗತ ವರ್ಷದ ವರದಿ ಮಂಡಿಸಿದರು.

ಜಿಲ್ಲಾ ಸಹ ತರಬೇತುದಾರ ಶೇಖರ ಶೆಟ್ಟಿ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಡಾ. ವಸಂತ ಶೆಟ್ಟಿ ನೂತನ ಸದಸ್ಯರನ್ನು ಪರಿಚಯಿಸಿದರು.‌ ಕ್ಲಬ್ ವತಿಯಿಂದ ಅತ್ತಾವರ ಸರಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ಕೊಡುಗೆ ನೀಡಲಾಯಿತು.


ವೇದಿಕೆಯಲ್ಲಿ ಸಹಾಯಕ ಗವರ್ನರ್ ವಿನೋದ ಕುಡ್ವ, ವಲಯ ಸೇನಾನಿ ಪ್ರಕಾಶ್, ‌ವಿನ್ಸೆಂಟ್ ನಜರೆತ್ ಮತ್ತು ಗೋಪಾಲ ಶೆಟ್ಟಿ ಉಪಸ್ಥಿತರಿದ್ದು ಸೂಕ್ತ ಮಾರ್ಗದರ್ಶನ ನೀಡಿದರು. ಕ್ಲಬ್ ನ ನೂತನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಧನ್ಯವಾದ ಸಲ್ಲಿಸಿದರು.

Related posts

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಕೊಯ್ಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ 75ನೇ ವರ್ಷದ ಅಮೃತ ಮಹೋತ್ಸವದ‌ “ಅಮೃತ ಕೊಯ್ಲು” ಆಮಂತ್ರಣ

Suddi Udaya

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!