ವೇಣೂರು: ಮಂಗಳೂರಿನ ಪ್ರತಿಷ್ಠಿತವೆಂದು ಕರೆಸಿಕೊಳ್ಳುವ ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾದ ಗರ್ಭಿಣಿ ಹೆಣ್ಣುಮಗಳೊಬ್ಬಳು ಆಸ್ಪತ್ರೆಯ ಬೇಜವಾಬ್ದಾರಿ ಮತ್ತು ವೈದ್ಯರ ನಿರ್ಲಕ್ಷಕ್ಕೆ ಬಲಿಯಾಗಿದ್ದಾರೆ. ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯಿಂದಾದ ಎಡವಟ್ಟಿಗೆ ಗರ್ಭಕೋಶವನ್ನು ಕಳೆದುಕೊಂಡಿದ್ದಲ್ಲದೆ ಮೆದುಳು ನಿಷ್ಕ್ರಿಯಗೊಂಡು ಕೋಮಕ್ಕೆ ತೆರಳಿದ್ದಾರೆ.
ವೇಣೂರಿನ ಗೋಳಿಯಂಗಡಿಯ ನಿವಾಸಿ ಶಿಲ್ಪಾ ಎನ್ನುವ ಗರ್ಭಿಣಿ ಹೆಣ್ಣುಮಗಳೊಬ್ಬಳು ತನ್ನ ಎರಡನೇ ಮಗುವಿನ ಹೆರಿಗೆಗಾಗಿ ಜು.2 ರಂದು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಾಗುತ್ತಾರೆ. ಹೆರಿಗೆಗೆ ಮೊದಲು ಕಳೆದ ಒಂಬತ್ತು ತಿಂಗಳು ಎಲ್ಲಾ ರೀತಿಯ ವೈದ್ಯಕೀಯ ಪರೀಕ್ಷೆಗಳನ್ನು ಅಲ್ಲೇ ನಡೆಸಿರುತ್ತಾರೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದಲ್ಲಿ ಉಚಿತ ಚಿಕಿತ್ಸೆ ಸಿಗುತ್ತದೆಂಬ ಕಾರಣಕ್ಕೆ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆರೋಗ್ಯವಂತ ಮಹಿಳೆಗಾದ ಅನ್ಯಾಯಕ್ಕೆ ಯಾರು ಹೊಣೆ ?ಎಡವಟ್ಟಾದ ಚಿಕಿತ್ಸೆಯಿಂದ ಜೀವವನ್ನೇ ಕಳೆದುಕೊಂಡ ಮಹಿಳೆಯ ಕುಟುಂಬಕ್ಕಾದ ಅನ್ಯಾಯಕ್ಕೆ ಹೊಣೆಯಾರು?