ಹೊಸಂಗಡಿ: ಇಲ್ಲಿನ ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರು ಜು.13 ರಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹರೇಕಳ ಹಾಜಬ್ಬ, ಊರಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಊರಿಗೆ ಶಾಲೆ ತರಲು ಪ್ರಯತ್ನಿಸಿದೆ. ನನ್ನ ಸಂಕಲ್ಪಕ್ಕೆ ಜನಪ್ರತಿನಿಧಿಗಳು, ದಾನಿಗಳು, ಶಿಕ್ಷಣ ಪ್ರೇಮಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳು ಬೆಂಬಲ ನೀಡಿದರು ಎಂದರು.
ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ದೇಶದ ಉನ್ನತ ಸಾಧಕರಾಗಿ ಹೊರಹೊಮ್ಮಬೇಕು. ಆಗ ಪೋಷಕರು, ಗುರುಗಳ ಶ್ರಮ ಸಾರ್ಥಕವಾಗುತ್ತದೆ ಎಂದು ಹರೇಕಳ ಹಾಜಬ್ಬ ಹೇಳಿದರು.
ಗೌರವ ಅತಿಥಿಯಾಗಿ ಎನ್.ಟಿ ಬಾಳೆಪುಣಿ ಹಿರಿಯ ಪತ್ರಕರ್ತರು ಹೊಸದಿಂಗತ ದಿನ ಪತ್ರಿಕೆ, ಮಂಗಳೂರು. ಇವರು ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಇವರ ಸಾಧನೆ ಮತ್ತು ಕಿರು ಪರಿಚಯವನ್ನು ಮಾಡಿದರು.
ವಿದ್ಯಾರ್ಥಿಗಳ ವಿವಿಧ ಸಂಘಗಳನ್ನು ಶಾಲೆಯ ಹಿತೈಷಿಗಳಾದ ಸೀತಾರಾಮ ರೈ ಉದ್ಘಾಟಿಸಿದರು. ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳ ವತಿಯಿಂದ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು. ಬಳಿಕ ವಿದ್ಯಾರ್ಥಿಗಳು ಹಾಜಬ್ಬರ ಜೊತೆಯಲ್ಲಿ ಸಂವಾದ ನಡೆಸಿದರು. ಶಾಲೆಯ ಹಿತೈಷಿ ಖಾಲಿದ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ ಪ್ರಮಾಣ ವಚನ ಬೋಧಿಸಿದರು. ಶಿಕ್ಷಕಿ ಶ್ರೀಮತಿ ವಿದ್ಯಾಲತಾ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕಿ ಅನಿತಾ ಸ್ವಾಗತಿಸಿದರು. ಶಿಕ್ಷಕಿ ನಯನಾ ವಂದಿಸಿದರು. ಚಿತ್ರಕಲಾ ಶಿಕ್ಷಕ ಸುಧೀರ್ ಬಾಳೆಪುಣಿ ಕಾರ್ಯಕ್ರಮ ನಿರ್ವಹಿಸಿದರು.