38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

ಅರಸಿನಮಕ್ಕಿ : ಕೊಕ್ಕಡ ವಲಯದ ಭಜನಾ ಪರಿಷತ್ ಸಭೆಯನ್ನು, ಅರಸಿನಮಕ್ಕಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ರವರು ಕಾರ್ಯಕ್ರಮದ ಉದ್ದೇಶ, ಮೂಲಭೂತ ಸೌಕರ್ಯಗಳ ಬಗ್ಗೆ, 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಸೇರುವ ಬಗ್ಗೆ, ನಮ್ಮ ಸಂಪ್ರದಾಯದಲ್ಲಿ ಭಜನೆಗೆ ಇರುವ ಮಹತ್ವದ ಬಗ್ಗೆ ಸವಿವಾರವಾಗಿ ಮಾಹಿತಿಯನ್ನು ನೀಡಿದರು.

ನಂತರದಲ್ಲಿ ಭಜನಾಪರಿಷತ್ ಕೊಕ್ಕಡ ವಲಯದ ಸಂಯೋಜಕರು ಕೃಷ್ಣಪ್ಪ ರವರು ಪ್ರಥಮವಾಗಿ ಎಲ್ಲರಿಗೂ ವಂದಿಸಿ, ಪೂಜ್ಯಖಾವಂದರಿಗೆ ಭಜನಾ ಮಂಡಳಿಗಳ ಮೇಲೆ ಇರುವ ಅಭಿಮಾನದ ಬಗ್ಗೆ, ವಲಯದಲ್ಲಿ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಗಳು ಒಗ್ಗಟ್ಟಿನಲ್ಲಿ ಇದ್ದು ಉತ್ತಮವಾಗಿ ಸಂಘಟನೆಯನ್ನು ಮಾಡಿ ನಮ್ಮ ಬೆಳ್ತಂಗಡಿ ತಾಲೂಕಿನಲ್ಲಿ ವಲಯದಲ್ಲಿ ಎಲ್ಲಾ ಭಜನಾ ಮಂಡಳಿಗಳು ಕ್ರಿಯಾಶೀಲಾ ಇರುವ ಹಾಗೆ ನಾವೆಲ್ಲರೂ ಪ್ರಯತ್ನ ಪಡೋಣ ಎಂದು ಶುಭವನ್ನು ಹಾರೈಸಿದರು.

ಸಭೆಯಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ವಲಯದ ಎಲ್ಲಾ ಭಜನಾ ಪರಿಷತ್ ನ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya
error: Content is protected !!