September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

ನೆರಿಯ : ನೆರಿಯ ಹಿಂದೂ ರುದ್ರಭೂಮಿ ಗೊಂದಲವನ್ನು ತಹಶೀಲ್ದಾರ್ ರವರು ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸುವ ಮೂಲಕ ಸಮಸ್ಯೆ ಪರಿಹರಿಸಿದ ಬಗ್ಗೆ ಗ್ರಾಮಸ್ಥರು ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.

ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಿಂದೂ ರುದ್ರಭೂಮಿ ಇಲ್ಲದಿರುವ ಬಗ್ಗೆ ಗ್ರಾಮಸ್ಥರು ಮೃತ ದೇಹ ಇಟ್ಟು ಪ್ರತಿಭಟನೆಯನ್ನು ಜು 15 ರಂದು ನಡೆಸಿದರು. ಹಿಂದೂ ರುದ್ರಭೂಮಿ ನಿಗದಿಗೊಳಿಸದೇ ಮೃತ ದೇಹದ ಅಂತಿಮ ಸಂಸ್ಕಾರ ಮಾಡುವುದಿಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡಿದರು.

ಜು14 ರಂದು ನೆರಿಯ ಗ್ರಾಮದ ಜನತಾಕಾಲನಿ ನಿವಾಸಿ ಸಂಜೀವಗೌಡ ( 49ವ ) ರವರು ಮೃತ ಪಟ್ಟಿದ್ದು ಮೃತರ ಅಂತ್ಯ ಸಂಸ್ಕಾರ ನಡೆಸಲು ನೆರಿಯ ಗ್ರಾಮದಲ್ಲಿ ಹಿಂದೂ ರುದ್ರಭೂಮಿ ಇರದೇ ಇರುವುದರಿಂದ ನೆರಿಯ ಗ್ರಾಮ ಪಂಚಾಯತ್ ಎದುರುಗಡೆ ಅಂತ್ಯ ಸಂಸ್ಕಾರ ನಡೆಸಲು ಗ್ರಾಮಸ್ಥರು ಸಿದ್ಧತೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ ನೀಡಿದಾಗ ಇವತ್ತೇ ಹಿಂದೂ ರುದ್ರಭೂಮಿಗೆ ಜಾಗ ಗುರುತಿಸಿಕೊಡಬೇಕು ಅದೇ ಜಾಗದಲ್ಲಿ ಮೃತದೇಹದ ಅಂತ್ಯ ಸಂಸ್ಕಾರ ಮಾಡುವುದಾಗಿ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಈಗಾಗಲೇ ಇಟ್ಟಾಡಿ ಎಂಬಲ್ಲಿ ಹಿಂದೂರುದ್ರಭೂಮಿಗಾಗಿ ಜಾಗ ಮೀಸಲಿರಿಸಿದ ಸ್ಥಳವನ್ನು ತಹಶೀಲ್ದಾರ್ ಹಾಗೂ ಅಧಿಕಾರಿಗಳು ಪರಿಶೀಲಿಸುವ ಸಂದರ್ಭ ಸ್ಥಳೀಯ ಕೆಲವರು ಆ ಜಾಗದಲ್ಲಿ ಹಿಂದೂರುದ್ರಭೂಮಿ ಮಾಡಲು ವಿರೋಧ ವ್ಯಕ್ತಪಡಿಸಿದರಲ್ಲದೇ ಯಾವುದೇ ಕಾರಣಕ್ಕೂ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ರಸ್ತೆಗೆ ಅಡ್ಡಲಾಗಿ ಕೂತಾಗ ಸ್ವಲ್ಪ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಈ ಸಂದರ್ಭದಲ್ಲಿ ಗ್ರಾಮಸ್ಥರು ಪಂಚಾಯತ್ ಮುಂಭಾಗದಲ್ಲಿ ಅಂತ್ಯಸಂಸ್ಕಾರಕ್ಕೆ ಮಾಡಲು ಮುಂದಾಗಿ ಪಂಚಾಯತ್ ಪಕ್ಕದಲ್ಲಿ ಸರ್ಕಾರಿ ಭೂಮಿ ಇದೆ ಅದನ್ನು ಹಿಂದೂ ರುದ್ರಭೂಮಿಗೆ ಮೀಸಲಿರಿಸಿ ಎಂದು ತಹಶೀಲ್ದಾರ್ ಅವರನ್ನು ಒತ್ತಾಯಿಸಿದ್ದಾರೆ. ಈ ವೇಳೆ ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಪಂಚಾಯತ್ ಬಳಿ ಇರುವ ಜಾಗವನ್ನು ಪರಿಶೀಲಿಸಿ ರುದ್ರಭೂಮಿಗೆ ಅಲ್ಲೆ ಮಾಡುವಂತೆ ಸೂಚಿಸಿದಾಗ ಗ್ರಾಮಸ್ಥರೆಲ್ಲ ಪ್ರತಿಭಟನೆಯನ್ನು ಹಿಂಪಡೆದು ಅದೇ ಜಾಗದಲ್ಲಿ ಸಂಜೀವ ಗೌಡ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲು ವ್ಯವಸ್ಥೆ ಮಾಡುವ ಮೂಲಕ ನೆರಿಯ ಹಿಂದೂ ರುದ್ರಭೂಮಿಯ ಪ್ರತಿಭಟನೆ ಸುಖಾಂತ್ಯಗೊಂಡಿದೆ.

Related posts

ಸಿಂಧೂರ ಶೆಟ್ಟಿ ರಚಿಸಿದ ಸ್ಕ್ರಿಬಲ್ ಆರ್ಟ್ ಇಂಡಿಯಾ ಬುಕ್ ಆಪ್ ರೆಕಾರ್ಡ್‌ಗೆ ಸೇರ್ಪಡೆ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!