27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗವು ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜು.8, 2023 ರಂದು ಕಾಲೇಜಿನಲ್ಲಿ ಆಯೋಜಿಸಿತು.
ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಅವರು ಭಾಗವಹಿಸಿ ಗೋಪಾಲ ನಾಯ್ಕ ಅವರು ಪ್ರತಿಭಾವಂತ ಕವಿಯಾಗಿಯಾಗಿದ್ದರು. ತುಳುವ ಮೌಖಿಕ ಪರಂಪರೆಯ ಸಮರ್ಥ ಕೊಂಡಿಯಾಗಿ ಅಪಾರ ಕೊಡುಗೆ ನೀಡಿದ್ದಾರೆ. ಅವರೊಬ್ಬ ಅಂತಾರಾಷ್ಟ್ರೀಯ ಕವಿಯಾಗಿ ಹೊರಹೊಮ್ಮಿದ್ದಾರೆ. ತುಳುನಾಡಿನ ಜಾನಪದ ಅಷ್ಟೊಂದು ಶ್ರೀಮಂತವಾದುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ವಹಿಸಿದ್ದರು. ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ, ಗೋಪಾಲ ನಾಯ್ಕ ಅವರ ಪುತ್ರ ಸಿದ್ಧವನ ಗುರುಕುಲದ ಪ್ರಧಾನ ಪಾಲಕ ಕೇಶವ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಡಿ. ಯದುಪತಿ ಗೌಡ ಅವರು ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಬೋಜಮ್ಮ ಕೆ. ಎನ್. ಅವರು ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕನ್ನಡ ಸಹ ಪ್ರಾಧ್ಯಾಪಕ ದಿವ ಕೊಕ್ಕಡ ಕಾರ್ಯಕ್ರಮ ಸಂಯೋಜಿಸಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya
error: Content is protected !!