22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

ಬೆಳ್ತಂಗಡಿ: ರವಿವಾರದ ರಜಾದಿನವಾದ ಕಾರಣ ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಜು.16 ರಂದು ದಿಡುಪೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪ್ರಥಮ ಪುತ್ರ, 8 ನೇ ತರಗತಿ ವಿದ್ಯಾರ್ಥಿ ಶ್ರೀಶ (14) ಎಂಬವರೇ ಮೃತರಾದವರು.

ಇವರು ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿದ್ದು, ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಆಗಮಿಸಿ ಅಗತ್ಯ ಕಾನೂನು ಕ್ರಮ ಜರುಗಿಸಿದ್ದಾರೆ.

Related posts

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya
error: Content is protected !!