September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

ಬೆಳ್ತಂಗಡಿ: ರವಿವಾರದ ರಜಾದಿನವಾದ ಕಾರಣ ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಜು.16 ರಂದು ದಿಡುಪೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪ್ರಥಮ ಪುತ್ರ, 8 ನೇ ತರಗತಿ ವಿದ್ಯಾರ್ಥಿ ಶ್ರೀಶ (14) ಎಂಬವರೇ ಮೃತರಾದವರು.

ಇವರು ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿದ್ದು, ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಆಗಮಿಸಿ ಅಗತ್ಯ ಕಾನೂನು ಕ್ರಮ ಜರುಗಿಸಿದ್ದಾರೆ.

Related posts

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ಪಡಂಗಡಿ ಗ್ರಾ.ಪಂ.ನಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!