34.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

ಬೆಳ್ತಂಗಡಿ: ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು.

ಕಾರ್ಯಗಾರವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಪುಂಜಾಲಕಟ್ಟೆ ಸರ್ಕಾರಿ ಪದವಿ ಕಾಲೇಜಿನ ಡಾಕ್ಟರ್ ಲೋಕೇಶ್ ಹಾಗೂ ಬೆಳ್ತಂಗಡಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಆಂಟೊನಿ ಇವರು ಭಾಗವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಕೆ ವಹಿಸಿದ್ದರು

ಕಾರ್ಯಕ್ರಮದಲ್ಲಿ ಐಕ್ಯೂ ಎ ಸಿ ಸಂಚಾಲಕರಾದ ಡಾ. ಕುಶಾಲಪ್ಪ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಯೋಜಕರಾದ ಡಾ. ರವಿ ಎಂ ಎನ್ ಉಪಸ್ಥಿತರಿದ್ದರು

ಕಾರ್ಯಗಾರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅನ್ಯನ್ಯ ಕಾಲೇಜುಗಳಿಂದ 130 ಸ್ನಾತ್ತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಾಣಿಜ್ಯ ಸಹಾಯಕ ಪ್ರಾಧ್ಯಾಪಕರಾದ ಪ್ರೊಫೆಸರ್ ರಾಜೇಶ್ವರಿ ಸ್ವಾಗತಿಸಿ ವಿದ್ಯಾರ್ಥಿ ನಾಯಕ ಚೇತನ್ ರಾಜ್ ವಂದಿಸಿದರು.

Related posts

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!