25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆಯನ್ನು, ಬಡಕೋಡಿ ವಲಯ ಕಚೇರಿಯಲ್ಲಿ ನಡೆಸಲಾಯಿತು.

ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ರವರು ಕಾರ್ಯಕ್ರಮದ ಉದ್ದೇಶ, ಮೂಲಭೂತ ಸೌಕರ್ಯಗಳ ಬಗ್ಗೆ, 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಸೇರುವ ಬಗ್ಗೆ, ನಮ್ಮ ಸಂಪ್ರದಾಯದಲ್ಲಿ ಭಜನೆಗೆ ಇರುವ ಮಹತ್ವದ ಬಗ್ಗೆ ಸವಿವಾರವಾಗಿ ಮಾಹಿತಿಯನ್ನು ನೀಡಿದರು. ಪೂಜ್ಯಖಾವಂದರಿಗೆ ಭಜನಾ ಮಂಡಳಿಗಳ ಮೇಲೆ ಇರುವ ಅಭಿಮಾನದ ಬಗ್ಗೆ, ವಲಯದಲ್ಲಿ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಗಳು ಒಗ್ಗಟ್ಟಿನಲ್ಲಿ ಇದ್ದು ಉತ್ತಮವಾಗಿ ಸಂಘಟನೆಯನ್ನು ಮಾಡಿ ನಮ್ಮ ಬೆಳ್ತಂಗಡಿ ತಾಲೂಕಿನಲ್ಲಿ ವಲಯದಲ್ಲಿ ಎಲ್ಲಾ ಭಜನಾ ಮಂಡಳಿಗಳು ಕ್ರಿಯಾಶೀಲಾ ಇರುವ ಹಾಗೆ ನಾವೆಲ್ಲರೂ ಪ್ರಯತ್ನ ಪಡೋಣ ಎಂದು ಶುಭವನ್ನು ಹಾರೈಸಿದರು.

ಸಭೆಯಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್, ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ಕುಮಾರಿ, ವಲಯದ ಎಲ್ಲಾ ಭಜನಾ ಪರಿಷತ್ ನ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಶ್ರೀಮತಿ ಮಮತಾ ಸ್ವಾಗತಿಸಿ, ಶ್ರೀಮತಿ ಶಶಿಕಲಾ ವಂದಿಸಿದರು.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!