23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

ಬೆಳ್ತಂಗಡಿ: ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ಜು.15 ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದ ದೌರ್ಜನ್ಯವನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ.

ವರದಿಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ದೌರ್ಜನ್ಯ ನಡೆದಿದ್ದು ಈ ಘಟನೆ ಪತ್ರಿಕಾ ಸ್ವಾತಂತ್ರ‍್ಯಕ್ಕೆ ಧಕ್ಕೆ ತಂದಿದೆ. ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಬೆಳ್ತಂಗಡಿ ಪತ್ರಕರ್ತರ ಸಂಘದ ವತಿಯಿಂದ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮಸ್ಥಳ, ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಎಣಿಂಜೆ, ಕೋಶಾಧಿಕಾರಿ ತುಕರಾಮ್ ಬಿ, ಸದಸ್ಯರುಗಳಾದ ದೇವಿಪ್ರಸಾದ್, ಬಿ.ಎಸ್. ಕುಲಾಲ್, ಜಾರಪ್ಪ ಪೂಜಾರಿ, ಶಿಬಿ ಧರ್ಮಸ್ಥಳ, ಅಚುಶ್ರೀ ಬಾಂಗೇರು, ಶ್ರೀನಿವಾಸ ತಂತ್ರಿ ಉಪಸ್ಥಿತರಿದ್ದರು.

Related posts

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya
error: Content is protected !!