September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

ಬೆಳ್ತಂಗಡಿ: ದ.ಕ.ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 10 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿದ್ದು, 18 ವಿದ್ಯಾರ್ಥಿನಿಲಯಗಳಿಗೆ ಅನುದಾನದ ಲಭ್ಯತೆಯುನುಸಾರ ಹಂತಹಂತವಾಗಿ ಸ್ವಂತ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ಎಸ್.‌ತಂಗಡಗಿ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಅವರು ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು.
ದ.ಕ.ಜಿಲ್ಲೆಯಲ್ಲಿ ಒಟ್ಟು 75 ವಿದ್ಯಾರ್ಥಿನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು ಅದರಲ್ಲಿ 42 ನಿಲಯಗಳು ಸ್ವಂತ ಕಟ್ಟಡದಲ್ಲಿ , 28 ನಿಲಯಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡಗಳಲ್ಲಿರುವ ವಿದ್ಯಾರ್ಥಿನಿಲಯಗಳಿಗೆ ಮಂಜೂರಾತಿ ಸಂಖ್ಯೆಗನುಗುಣವಾಗಿ ಶೌಚಾಲಯ, ಸ್ನಾನಗೃಹ ಇತ್ಯಾದಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಎಲ್ಲಾ 75 ವಿದ್ಯಾರ್ಥಿ ನಿಲಯಗಳಲ್ಲಿನ ನಿಲಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯಗಳೊಂದಿಗೆ ಜಮಖಾನ, ಬೆಡ್‌ಶೀಟ್‌, ಲೇಖನಾ ಸಾಮಗ್ರಿ, ಶುಚಿ ಸಂಭ್ರಮ ಕಿಟ್‌, ಪ್ರೋತ್ಸಾಹ ಧನ ಸ್ಪೋಕನ್‌ ಇಂಗ್ಲೀಷ್‌, ವ್ಯಕ್ತಿತ್ವ ವಿಕಸನ ತರಬೇತಿ, ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.

Related posts

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya
error: Content is protected !!