ಅಳದಂಗಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ “ಆರೋಗ್ಯವಂತ ಕಣ್ಣುಗಳು ಮನುಷ್ಯನ ಅತ್ಯಮೂಲ್ಯ ಆಸ್ತಿ”. ಆರೋಗ್ಯವಂತ ಕಣ್ಣುಗಳು ಮನುಷ್ಯ ಜೀವನದ ಅತ್ಯಮೂಲ್ಯ ಆಸ್ತಿಯೆಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಕಣ್ಣು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಅನಿಲ್ ರಾವ್ ತಿಳಿಸಿದರು.
ಅವರು ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಶಿಬಿರಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸೌಮ್ಯ ಹರಿಪ್ರಸಾದ್, ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ ಶುಭ ಹಾರೈಸಿದರು. ಸಭೆಯಲ್ಲಿ ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರ್ಜುನ್, ಆಡಳಿತಾಧಿಕಾರಿ ಡಾ. ಸಂಜತ್, ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಲಯನ್ಸ್ ಕ್ಲಬ್ ಸದಸ್ಯರುಗಳು ಭಾಗವಹಿಸಿದ್ದರು.
125ಕ್ಕೂ ಹೆಚ್ಚು ಶಿಬಿರಾರ್ಥಿಗಳು ಈ ಶಿಬಿರದ ಸದುಪಯೋಗ ಪಡೆದರು. ಸುಲ್ಕೇರಿ ಲಯನ್ಸ್ ಕ್ಲಬ್ ಸದಸ್ಯ ವಿಶ್ವನಾಥ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಸುರೇಶ್ ಭಟ್ ಧನ್ಯವಾದವಿತ್ತರು.