ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಬೆಳ್ತಂಗಡಿ: ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಜೈನ ಮುನಿಗಳ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳ ಹಿಂದೂ ರಾಷ್ಟ್ರ ಆಂದೋಲನವು ಜು.19 ರಂದು ಮಿನಿ ವಿಧಾನ ಸೌಧದ ಮುಂಭಾಗ, ಬೆಳ್ತಂಗಡಿಯಲ್ಲಿ ನಡೆಯಲಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ, ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್‌ನ ವೇಣುಗೋಪಾಲ ಇವರ ಹತ್ಯೆ, ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ. ಅಷ್ಟೇ ಅಲ್ಲದೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಪ್ರತಿ ರವಿವಾರ ನಡೆಯುತ್ತಿದ್ದ ನಾಗರಕಟ್ಟೆಯ ಪೂಜೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬಕ್ರೀದ್ ಸಮಯದಲ್ಲಿ ಬಾದಾಮಿ, ಶಿಕಾರಿಪುರ, ಶಿರಸಿ ಸೇರಿದಂತೆ ಹಲವೆಡೆ ಅಕ್ರಮವಾಗಿ ಗೋಹತ್ಯೆ ಮಾಡಿ ಗೋವಿನ ಎಲಬುಗಳನ್ನು ದೇವಸ್ಥಾನ, ಹಿಂದೂ ಮನೆಗಳ ಎದುರು ಎಸೆದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ಹಿಂದೂ ಕಾರ್ಯಕರ್ತರಿಗೆ, ಹಿಂದೂ ಧರ್ಮಕ್ಕೆ ಹೋರಾಟ ಮಾಡುವವರಿಗೆ ರಕ್ಷಣೆ ನೀಡಬೇಕು, ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ಹಾಗೂ ಹಿಂದುಗಳ ಭೂಮಿಯನ್ನು ಕಬಳಿಸುವ ವಕ್ಪ್ ಬೋರ್ಡ್ ಕಾಯಿದೆ ಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಸಂಘಟನೆಗಳು ಒಂದಾಗಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

Leave a Comment

error: Content is protected !!