25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಪರಾಗ್ ಹೊಟೇಲಿನಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಪ್ರವೀಣ್ ಮುಗುಳಿ ವಿಟ್ಲ, ಕಾರ್ಯದರ್ಶಿಯಾಗಿ ಶೈಲಾ ರಮೇಶ್ ಬೆಳ್ತಂಗಡಿ, ಖಜಾಂಚಿಯಾಗಿ ಮೋಹಿತ್ ಕುಮಾರ್ ಗೌಡ ಕೊಳಿಗೆ ಪುತ್ತೂರು, ಉಪಾಧ್ಯಕ್ಷರಾಗಿ ಸಂಧ್ಯಾ ಪ್ರಭು ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ನವೀನ್ ಪದ್ಯಾಣ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಶೈಲಾ ರಮೇಶ್ ಅವರು ಮೂಲತಃ ಮಂಗಳೂರು ಉಳ್ಳಾಲದ ಸೋಮೇಶ್ವರ ನಿವಾಸಿಯಾಗಿದ್ದು ಪ್ರಸ್ತುತ ಬೆಳ್ತಂಗಡಿ ತಾಲೂಕಿನ ನಾವೂರು ಇಂಚರ ನಿವಾಸಿಯಾಗಿದ್ದಾರೆ. ಎಸ್‌ಡಿಎಂ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುವ ಇವರು ಬೆಂಗಳೂರಿನಲ್ಲಿ ಹೈಕೋರ್ಟ್‌ ವಕೀಲರಾಗಿದ್ದು ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ.

Related posts

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya
error: Content is protected !!