ಸುಲ್ಕೇರಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಸುಲ್ಕೇರಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಗ್ರಾಮ ಸಮೀಕ್ಷೆ ಕಾರ್ಯಕ್ರಮವು ಜು, 14 ರಂದು ನಡೆಯಿತು.
ಕ್ರಾರ್ಯಕ್ರಮವನ್ನು ಸುಲ್ಕೇರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿರವರು ದೀಪ ಬೆಳಗಿಸಿ ಉದ್ಘಾಟಿಸಿ ಸಮಾಜ ಕಾರ್ಯದಿಂದ ವಿದ್ಯಾರ್ಥಿಗಳಿಗೆ ಅಧ್ಯಯನ ಜೊತೆಗೆ ಜನರೊಂದಿಗೆ ಬೆರೆಯಲು ಉತ್ತಮ ಅವಕಾಶವನ್ನು ಒದಗಿಸುತ್ತದೆ. ಸಮಾಜಕಾರ್ಯ ವಿದ್ಯಾರ್ಥಿಗಳಿಗೆ ಪಂಚಾಯತ್ ಗಳಲ್ಲಿ ಅನೇಕ ಹುದ್ದೆಗಳಲ್ಲಿ ಉದ್ಯೋಗಾವಕಾಶಗಳು ಇವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಲ್ಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿ ವಹಿಸಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಸ್ನಾತಕೋತ್ತರ ಪದವಿ ಕೇಂದ್ರದ ಸಮಾಜ ಕಾರ್ಯ ವಿಭಾಗ ಮುಖ್ಯಸ್ಥ ಡಾ.ರವಿಶಂಕರ್, ಸಹ ಪ್ರಾಧ್ಯಾಪಕಿ ಡಾ.ಧನೇಶ್ವರಿ, ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಬಳಿಕ ಎಸ್.ಡಿ.ಎಮ್ ಸ್ನಾತಕೋತ್ತರ ಪದವಿ ಕೇಂದ್ರದ ಸಮಾಜ ಕಾರ್ಯ ವಿದ್ಯಾರ್ಥಿಗಳಿಗೆ ಗ್ರಾಮ ಸಮೀಕ್ಷೆಯ ಕುರಿತು ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮವನ್ನು ಎಸ್.ಡಿ.ಎಮ್ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ವಿದ್ಯಾರ್ಥಿ ಸುದರ್ಶನ್ ಸ್ವಾಗತಿಸಿ ,ವಿದ್ಯಾರ್ಥಿನಿ ಧನ್ಯಾ ವಂದಿಸಿದರು.ವಿದ್ಯಾರ್ಥಿನಿ ಅಶ್ವಿನಿ ಕಾರ್ಯಕ್ರಮ ನಿರ್ವಹಿಸಿದರು.