April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಕಾವಲು ಸಮಿತಿಯ ಸಭೆ ಅಧ್ಯಕ್ಷೆ ಶ್ರೀಮತಿ ಸುಭಾಷಿಣಿ ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸರ್ಕಾರಿ ಶಾಲೆಗಳ ಮುಖ್ಯಸ್ಥರು, ಕಳಿಯ ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಸಿಬ್ಬಂದಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಗಾಂಜಾ ಮಾದಕ ಪದಾರ್ಥ ಸೇವನೆಯ ಬಗ್ಗೆ ಜಾಗೃತಿ ಮೂಡಿಸಲು ಚರ್ಚಿಸಲಾಯಿತು. ಆರೋಗ್ಯ ಇಲಾಖೆಯ ಡಾ .ನಾಗರಾಜ್ ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ ಮುಂತಾದ ರೋಗ ಹರಡದಂತೆ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಲು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ತಿಳಿಸಿ ಆರೋಗ್ಯ ಇಲಾಖೆಯ ಕರಪತ್ರ ಹಂಚಿದರು. ಪಂಚಾಯತ್ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹವನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ಸೂಕ್ತ ಕ್ರಮವನ್ನು ವಹಿಸಲು ನಿರ್ಣಯಿಸಲಾಯಿತು.

ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya
error: Content is protected !!