September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

ನಡ : ಮಕ್ಕಳ ಓದು ಹಾಗೂ ಬರಹವನ್ನು ಉತ್ತೇಜಿಸುವ ಉದ್ದೇಶದಿಂದ ಸರಕಾರಿ ಪ್ರೌಢಶಾಲೆ ನಡ ಇಲ್ಲಿನ ಮಕ್ಕಳ ಸೃಜನಶೀಲತೆಯ ಪ್ರತೀಕವಾಗಿ “ಮಕ್ಕಳ ವಾಣಿ” ಮಾಸಿಕ ಪತ್ರಿಕೆಯ ಬಿಡುಗಡೆಯನ್ನು ಬೆಳ್ತಂಗಡಿಯ ಹಿರಿಯ ಪತ್ರಕರ್ತ ಶಿಬಿ ಧರ್ಮಸ್ಥಳ ರವರು ಜು.19 ರಂದು ಬಿಡುಗಡೆಗೊಳಿಸಿದರು.

ಸರಕಾರಿ ಪ್ರೌಢಶಾಲೆ ನಡದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಶಿಬಿ ಧರ್ಮಸ್ಥಳ ಇವರು “ಮಕ್ಕಳು ಓದುವ ಅಭ್ಯಾಸ ರೂಢಿಸಿಕೊಂಡಾಗ, ಬರೆಯಲು ಸಾಧ್ಯ. ಓದುವ ಮೂಲಕ ಶಬ್ಧ ಭಂಡಾರವನ್ನು ಹೆಚ್ಚಿಸಿಕೊಳ್ಳಬಹುದು. ಇದರಿಂದ ಬರವಣಿಗೆಯ ಕಲೆ ಉತ್ತಮಪಡಿಸಬಹುದು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಲಾ ಪತ್ರಿಕೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ ಶಿಬಿ ಧರ್ಮಸ್ಥಳ ಅವರು ನಡ ಪ್ರೌಢಶಾಲೆಯ ಸಾಧನೆ ರಾಜ್ಯಕ್ಕೇ ಮಾದರಿಯಾಗಿದೆ ಎಂದರು. ಶಾಲಾ ಮುಖ್ಯಶಿಕ್ಷಕ ಯಾಕೂಬ್ ಎಸ್. ಮಾತಾಡಿ ಮಕ್ಕಳ ಸೃಜನಶೀಲತೆಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ ಇದೊಂದು ವಿನೂತನ ಪ್ರಯೋಗವಾಗಿದೆ ಎಂದರು. ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ಸುಧಾಕರ ಇವರು ವಹಿಸಿದ್ದು ಇದೊಂದು ಮಾದರಿ ಪ್ರಯೋಗವಾಗಿದೆ ಎಂದರು.

ಸಮಾರಂಭದಲ್ಲಿ ಮಾತಾಡಿ ಪತ್ರಿಕೆಯ ಹಿಂದಿರುವ ಶ್ರಮದ ಬಗ್ಗೆ ಶಿಕ್ಷಕರಾದ ಶಿವಪುತ್ರ ಸುಣಗಾರ ವಿವರಿಸಿದರು. ಶಿಕ್ಷಕ ಮೋಹನ ಬಾಬು ಹಾಗೂ ಶಿಕ್ಷಕಿಯರುಗಳಾದ ಶ್ರೀಮತಿ ಸುಜಯ ಬಿ, ಶ್ರೀಮತಿ ಶೋಭಾ ಎಸ್, ಶ್ರೀಮತಿ ಜಯಂತಿ ಸ್ಟ್ರೆಲ್ಲಾ ಹಾಗೂ ಕುಮಾರಿ ಫಾತಿಮತ್ ಮಿಶ್ರಿಯಾ ಉಪಸ್ಥಿತರಿದ್ದರು.

ಶಾಲಾ ಉಪನಾಯಕ ಹೃತಿಕ್ ಸ್ವಾಗತಿಸಿ, ಕುಮಾರಿ ಸಾನ್ವಿ ಧನ್ಯವಾದವಿತ್ತರು.

Related posts

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya
error: Content is protected !!