ಕಳಿಯ ಗ್ರಾಮ ಪಂಚಾಯತ್ ನಲ್ಲಿ ಕಾವಲು ಸಮಿತಿಯ ಸಭೆ ಅಧ್ಯಕ್ಷೆ ಶ್ರೀಮತಿ ಸುಭಾಷಿಣಿ ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸರ್ಕಾರಿ ಶಾಲೆಗಳ ಮುಖ್ಯಸ್ಥರು, ಕಳಿಯ ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಸಿಬ್ಬಂದಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಗಾಂಜಾ ಮಾದಕ ಪದಾರ್ಥ ಸೇವನೆಯ ಬಗ್ಗೆ ಜಾಗೃತಿ ಮೂಡಿಸಲು ಚರ್ಚಿಸಲಾಯಿತು. ಆರೋಗ್ಯ ಇಲಾಖೆಯ ಡಾ .ನಾಗರಾಜ್ ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ ಮುಂತಾದ ರೋಗ ಹರಡದಂತೆ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಲು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ತಿಳಿಸಿ ಆರೋಗ್ಯ ಇಲಾಖೆಯ ಕರಪತ್ರ ಹಂಚಿದರು. ಪಂಚಾಯತ್ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹವನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ಸೂಕ್ತ ಕ್ರಮವನ್ನು ವಹಿಸಲು ನಿರ್ಣಯಿಸಲಾಯಿತು.
ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ, ಧನ್ಯವಾದವಿತ್ತರು.